ವಕೀಲನ ಮೇಲೆ​ ಹಲ್ಲೆ ಪ್ರಕರಣವನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ

Update: 2023-12-03 16:17 GMT

ಚಿಕ್ಕಮಗಳೂರು: ಯುವ ವಕೀಲನ ಮೇಲೆ ಪೊಲೀಸ್​ ಠಾಣೆಯಲ್ಲಿ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ  ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಪಶ್ಚಿಮ ವಲಯದ ಐಜಿಪಿ ಚಂದ್ರಗುಪ್ತ ಸ್ಪಷ್ಟಪಡಿಸಿದ್ದಾರೆ.

ಕಾಫಿನಾಡಿನಲ್ಲಿ ವಕೀಲರು ಮತ್ತು ಪೊಲೀಸರ ನಡುವಿನ ಸಂಘರ್ಷ  ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಪ್ರಕರಣದ ಮಧ್ಯಪ್ರವೇಶಿಸಿದ್ದು, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವ ಮೂಲಕ ಸಂಘರ್ಷಕ್ಕೆ ತಾರ್ಕಿಕ ಅಂತ್ಯ ಕಾಣಿಸಲು ಮುಂದಾಗಿದೆ. ಈ ಸಂಬಂಧ ರವಿವಾರ ರಾತ್ರಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಐಜಿಪಿ ಚಂದ್ರಗುಪ್ತ. ವಕೀಲರ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಪ್ರಕರಣ ಸಂಬಂಧ ಆರು ಮಂದಿ ಪೊಲೀಸರನ್ನು ಅಮಾನತು ಮಾಡಿದ್ದು, ತನಿಖೆ ಮುಂದುವರಿದಿದೆ. ಈ ಪ್ರಕರಣ ಸಂಬಂಧ ಪೊಲೀಸ್ ಸಿಬ್ಬಂದಿ ದೂರು ನೀಡಿದ್ದು, ವಕೀಲ ಪ್ರೀತಮ್ ಸೇರಿದಂತೆ ಇತರೆ ವಕೀಲರ ವಿರುದ್ಧವೂ ದೂರು ದಾಖಲಾಗಿದೆ. ರಾಜ್ಯ ಸರಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿರುವುದರಿಂದ ಘಟನೆಯಲ್ಲಿ ನೊಂದವರಿಗೆ ನ್ಯಾಯಸಿಗಲಿದೆ ಎಂದು ತಿಳಿಸಿದರು.

ಏನಿದು ಪ್ರಕರಣ: ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಂ ಅವರು ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಅಲ್ಲಿನ ನಗರದ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಸಿಬ್ಬಂದಿ ಪ್ರೀತಂ ಅವರನ್ನು ಠಾಣೆಗೆ ಎಳೆದುಕೊಂಡು ಹೋಗಿ ಲಾಠಿ, ದೊಣ್ಣೆಯಿಂದ ಥಳಿಸಿ,ಶೂ ಕಾಲಿನಿಂದ ಹಲ್ಲೆ ನಡೆಸಿದ್ದರು ಎಂಬುದಾಗಿ ವಕೀಲ ಪ್ರೀತಂ ಪೊಲೀಸರ ಮೇಲೆ ಆರೋಪ ಮಾಡಿದ್ದರು. ಈ ಸಂಬಂಧ ಇದು ಮಾರಣಾಂತಿಕ ಹಲ್ಲೆಯಾಗಿದೆ. ಕೊಲೆ ಪ್ರಕರಣವನ್ನು ಪೊಲೀಸರ ಮೇಲೆ ದಾಖಲಿಸಬೇಕು. ಹಾಗೂ ಅವರನ್ನು ಸೇವೆಯಿಂದ ವಜಾಗೊಳಿಸಬೇಕು. ತಕ್ಷಣ ಅವರನ್ನು ಬಂಧಿಸಬೇಕು ಎಂದು ವಕೀಲರು ಪ್ರತಿಭಟನೆ ನಡೆಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News