ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ

Update: 2024-08-14 16:11 GMT

ಬೆಂಗಳೂರು : ರಾಜ್ಯ ಸರಕಾರವು ಏಳು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಖುಷ್ಬೂ ಜಿ.ಚೌಧರಿ ಅವರನ್ನು ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಹಾಗೂ ಡಾ.ವೆಂಕಟೇಶ್ ಎಂ.ವಿ. ಅವರನ್ನು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಹಟ್ಟಿ ಚಿನ್ನದ ಗಣಿ ಕಂಪೆನಿಯ ವ್ಯವಸ್ಥಾಪಕ ನಿದೇಶಕ ಶೆಟ್ಟೆಣ್ಣನವರ್ ಎಸ್.ಬಿ. ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ, ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸತೀಶ ಬಿ.ಸಿ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತ ಬಸವರಾಜೇಂದ್ರ ಎಚ್. ಅವರನ್ನು ತೋಟಗಾರಿಕೆ ಇಲಾಖೆಯ ನಿರ್ದೇಶಕ, ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿಯ ಕಾರ್ಯಕಾರಿ ನಿರ್ದೇಶಕಿ ಲತಾ ಕುಮಾರಿ ಕೆ.ಎಸ್. ಅವರನ್ನು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾಂತರಾಜು ಪಿ.ಎಸ್. ಅವರನ್ನು ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿಯ ಕಾರ್ಯಕಾರಿ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News