ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ
Update: 2024-02-02 15:41 GMT
ಬೆಂಗಳೂರು: ಆಡಳಿತದ ದೃಷ್ಟಿಯಿಂದ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಬಿಬಿಎಂಪಿ ವಿಶೇಷ ಆಯುಕ್ತರಾಗಿದ್ದ(ಚುನಾವಣೆ) ಆರ್.ರಾಮಚಂದ್ರನ್ ಅವರನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಇದೇ ವೇಳೆ ಬೆಂಗಳೂರಿನ ಇ-ಗೌರ್ನೆನ್ಸ್ ನ ಸಿಇಒ ಆಗಿದ್ದ ಡಾ.ಸೆಲ್ವಂಮಣಿ ಆರ್. ಅವರನ್ನು ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವಿಶೇಷ ಆಯುಕ್ತ(ಚುನಾವಣೆ) ಹುದ್ದೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.