ಐವರು ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ

The state government ordered the transfer of five IAS officers;

Update: 2024-03-14 20:50 IST
ಐವರು ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ
  • whatsapp icon

ಬೆಂಗಳೂರು: ರಾಜ್ಯ ಸರಕಾರವು ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್ ಎಂ.ಎನ್. ಅವರನ್ನು ಪಶುಸಂಗೋಪನೆ, ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಜೊತೆಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.

ಪಶುಸಂಗೋಪನೆ, ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಯಾಗಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕಿ ಅರ್ಚನಾ ಎಂ.ಎಸ್. ಅವರನ್ನು ಕರ್ನಾಟಕ ಗೆಜೇಟಿಯರ್ ಇಲಾಖೆಯ ಮುಖ್ಯ ಸಂಪಾದಕಿಯಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಪ್ರಿಯಾಂಕಾ ಎಂ. ಅವರನ್ನು ವಾಯುವ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಹಾಗೂ ವಾಯುವ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ಅವರನ್ನು ಗದಗ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News