ಐವರು ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ

Update: 2024-06-14 13:21 GMT

ಬೆಂಗಳೂರು : ರಾಜ್ಯ ಸರಕಾರವು ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಟಿ.ಕೆ. ಅವರನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಹರ್ಷ ಗುಪ್ತ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ, ವಿಪುಲ್ ಬನ್ಸಾಲ್ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿಯಾಗಿ, ರಮಣ್‍ದೀಪ್ ಚೌಧರಿ ಅವರನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಟಿ.ಎಚ್.ಎಂ. ಅವರನ್ನು ಅವರನ್ನು ಜವಳಿ ಅಭಿವೃದ್ಧಿ ಆಯುಕ್ತ ಹಾಗೂ ಕೈಮಗ್ಗ ಮತ್ತು ಜವಳಿ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು ನಗರ ಪೂರ್ವ ವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಸಂಚಾರ ಪೂರ್ವ ವಿಭಾಗದ ಡಿಸಿಪಿಯಾಗಿ ಹಾಗೂ ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಿ.ದೇವರಾಜ ಅವರನ್ನು ಪೂರ್ವ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News