ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ

Update: 2024-02-27 15:31 GMT

ಬೆಂಗಳೂರು : ರಾಜ್ಯ ಸರಕಾರವು ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ.ಮಂಜುಳಾ ಎನ್. ಅವರನ್ನು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ರಣದೀಪ್ ಡಿ. ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಹಾಗೂ ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕಿ ದೀಪಾ ಎಂ. ಅವರನ್ನು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News