ಸಾಮಾಜಿಕ, ಆರ್ಥಿಕ ಸಮೀಕ್ಷಾ ವರದಿ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಅಂಕಿ-ಅಂಶಗಳು ಸುಳ್ಳು: ಸಚಿವ ತಂಗಡಗಿ ಸ್ಪಷ್ಟನೆ

Update: 2025-04-12 21:40 IST
ಸಾಮಾಜಿಕ, ಆರ್ಥಿಕ ಸಮೀಕ್ಷಾ ವರದಿ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಅಂಕಿ-ಅಂಶಗಳು ಸುಳ್ಳು: ಸಚಿವ ತಂಗಡಗಿ ಸ್ಪಷ್ಟನೆ

ಸಚಿವ ಶಿವರಾಜ್ ಎಸ್.ತಂಗಡಗಿ

  • whatsapp icon

ಬೆಂಗಳೂರು: ‘ಕರ್ನಾಟಕ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗಿರುವ ‘ಸಾಮಾಜಿಕ, ಆರ್ಥಿಕ ಸಮೀಕ್ಷಾ ವರದಿ’ ವೈಜ್ಞಾನಿಕವಾಗಿದೆ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ  ಹೇಳಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ಬಿಜೆಪಿ, ರಾಜಕೀಯ ಕಾರಣಕ್ಕಾಗಿ ಸಾಮಾಜಿಕ, ಆರ್ಥಿಕ ಸಮೀಕ್ಷಾ ವರದಿಗೆ ವಿರೋಧ ವ್ಯಕ್ತಪಡಿಸುತ್ತಿದೆ. 1.65 ಲಕ್ಷಕ್ಕೂ ಅಧಿಕ ಮಂದಿ ಈ ಸಮೀಕ್ಷೆಯಲ್ಲಿ ಭಾಗವಹಿಸಿದ್ದರು. ವೈಜ್ಞಾನಿಕವಾಗಿ ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ವರದಿಯಲ್ಲಿ ದತ್ತಾಂಶಗಳನ್ನು ಬದಲಾವಣೆ ಮಾಡಲಾಗಿದೆ ಎಂಬುದು ಆಧಾರರಹಿತ ಎಂದು ಪ್ರತಿಕ್ರಿಯೆ ನೀಡಿದರು.

‘ಸಮೀಕ್ಷೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಲಿಂಗಾಯತರು, ಒಕ್ಕಲಿಗರು ಸೇರಿದಂತೆ ಎಲ್ಲ ಜಾತಿಗಳನ್ನೂ ಸಮೀಕ್ಷೆಗೆ ಬಳಸಿಕೊಳ್ಳಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಅಂಕಿ-ಅಂಶಗಳು ಸಂಪೂರ್ಣ ಸುಳ್ಳು’ ಎಂದು ಶಿವರಾಜ್ ತಂಗಡಗಿ ಇದೇ ವೇಳೆ ಸ್ಪಷ್ಟಪಡಿಸಿದರು.

ಎ.17ರಂದು ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷಾ ವರದಿಯನ್ನು ಮಂಡಿಸಲಾಗುತ್ತದೆ. ಅನಂತರ ಅದರಲ್ಲಿರುವ ಅಂಕಿ-ಅಂಶಗಳು ಹಾಗೂ ಮಾಹಿತಿಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಈಗಾಗಲೇ ಎಲ್ಲ ಸಚಿವರಿಗೂ ವರದಿಯನ್ನು ನೀಡುವ ಕೆಲಸವಾಗುತ್ತಿದೆ ಎಂದು ಶಿವರಾಜ್ ತಂಗಡಗಿ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News