ಸಂಸದ ಸ್ಥಾನದಿಂದ ಪ್ರಜ್ವಲ್​​ ಅನರ್ಹ | ನಮ್ಮ ಕಾನೂನು ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದ ಜೆಡಿಎಸ್ ಶಾಸಕ ಎ.ಮಂಜು

Update: 2023-09-01 13:13 GMT

ಬೆಂಗಳೂರು, ಸೆ.1: ಹಾಸನ ಸಂಸದ‌ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದ್ದು, ಈ ಬಗ್ಗೆ ಪ್ರಜ್ವಲ್ ವಿರುದ್ಧ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದ ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು ಅವರು ಪ್ರತಿಕ್ರಿಯಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼʼಹೈಕೋರ್ಟ್​ ತೀರ್ಪನ್ನು ಸ್ವಾಗತಿಸುವೆ, ನಮ್ಮ ಕಾನೂನು ಹೋರಾಟಕ್ಕೆ ನ್ಯಾಯ ಸಿಕ್ಕಿದೆʼʼ ಎಂದು ಅವರು ತಿಳಿಸಿದರು.  

ʼʼಸುಳ್ಳು ಮಾಹಿತಿ ನೀಡಿದ್ದರಿಂದ ಹೈಕೋರ್ಟ್ ಅನರ್ಹಗೊಳಿಸಿದೆ. ನಾವು ಸರಿಯಿದ್ದೇವೆ ಅನ್ನುವುದಾದರೆ ಅವರು ಕಾನೂನು ಹೋರಾಟ ಮಾಡಲಿ. ಆದರೆ, ಬದಲಾದ ಸನ್ನಿವೇಶದಲ್ಲಿ ನಾನು ಜೆಡಿಎಸ್​ ಶಾಸಕನಾಗಿದ್ದೇನೆ. ಹಾಗಂತ ಒಂದೇ ಪಕ್ಷದಲ್ಲಿದ್ದೇವೆ ಎಂದು ಪ್ರಜ್ವಲ್​​ ವಿರುದ್ಧದ ಕೇಸ್​ ವಾಪಸ್​ ತೆಗೆದುಕೊಳ್ಳೋ ಪ್ರಶ್ನೆಯೇ ಇಲ್ಲʼʼ ಎಂದು ಅವರು ಸ್ಪಷ್ಟಪಡಿಸಿದ್ದಾರೆ. 

 ʼʼನಾನು ಜೆಡಿಎಸ್ ಸೇರುವಾಗ ಯಾವುದೇ ಷರತ್ತು ವಿಧಿಸಿರಲಿಲ್ಲ. ಪ್ರಜ್ವಲ್ ವಿರುದ್ಧ ಕೇಸ್ ಹಾಕಿದ್ದ​ ವಿಚಾರವಾಗಿ ಅಂದೇ ಹೇಳಿದ್ದೆ. ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಮಾತುಕತೆ ವೇಳೆ ಹೇಳಿದ್ದೆʼʼ ಎಂದು ಶಾಸಕ ಮಂಜು ಸ್ಪಷ್ಟಪಡಿಸಿದ್ದಾರೆ.

ಪ್ರಜ್ವಲ್​​ ರೇವಣ್ಣ ಅವರು ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ಎ.ಮಂಜು, ಮತ್ತು ವಕೀಲ ದೇವರಾಜೇಗೌಡ ಹೈಕೋರ್ಟ್ ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News