ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ನಾಯಕರು: ಸಂಸದ ಡಿ.ಕೆ.ಸುರೇಶ್

Update: 2023-11-03 13:15 GMT

ಬೆಂಗಳೂರು, ನ. 3: ‘ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಸಿಎಂ ಹುದ್ದೆ ಖಾಲಿ ಇದ್ದಾಗ ಚರ್ಚೆ ಮಾಡಬಹುದು’ ಎಂದು ಸಂಸದ ಡಿ.ಕೆ.ಸುರೇಶ್ ಪ್ರತಿಕ್ರಿಯೆ ನೀಡಿದ್ದು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಈ ಬಗ್ಗೆ ಯಾವುದೇ ಸಂದೇಹ ಬೇಡ’ ಎಂದು ತಿಳಿಸಿದ್ದಾರೆ.

ಶುಕ್ರವಾರ ಇಲ್ಲಿನ ಸದಾಶಿವನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗುರಿ. ಸರಕಾರ ಸುಭದ್ರವಾಗಿದೆ. ಎಐಸಿಸಿ ಅಧ್ಯಕ್ಷ ಹಾಗೂ ಪಕ್ಷರ ವರಿಷ್ಠರು ಎಲ್ಲವನ್ನೂ ತೀರ್ಮಾನ ಮಾಡಲಿದ್ದಾರೆ. ಹೀಗಾಗಿ ಊಹಾಪೋಹಗಳಿಗೆ ಅವಕಾಶವಿಲ್ಲ ಎಂದು ಸ್ಪಷ್ಟಣೆ ನೀಡಿದರು.

‘ಜಾತಿ ಗಣತಿ ವರದಿಯ ಬಗ್ಗೆ ಆದಿಚುಂಚನಗಿರಿ ಮಠದ ಶ್ರೀಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ. ಕಾಂತರಾಜ್ ಸಮಿತಿ ವರದಿ ಬಗ್ಗೆ ಚರ್ಚೆ ನಡೆಯುತ್ತಿದೆ. ವರದಿ ಸರಕಾರದ ಮುಂದೆ ಇನ್ನೂ ಬಂದಿಲ್ಲ. ಸಮಾಜದ ಅಭಿಪ್ರಾಯ ತಿಳಿಸಿದರೆ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News