ತೀರ್ಥಹಳ್ಳಿಯ ತಹಶೀಲ್ದಾರ್ ಬೆಂಗಳೂರಿನ ಲಾಡ್ಜ್ ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ!

Update: 2024-10-17 14:00 GMT

ಜಿ.ಬಿ.ಚಿಕ್ಕನಗೌಡರ್

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಹಶೀಲ್ದಾರ್ ಜಿ.ಬಿ.ಚಿಕ್ಕನಗೌಡರ್ ಅವರು ನಗರದ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಾಡ್ಜ್ ವೊಂದರಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಗುರುವಾರ ವರದಿಯಾಗಿದೆ.

ನ್ಯಾಯಾಲಯದ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಜಿ.ಬಿ.ಚಿಕ್ಕನಗೌಡರ್ ಗಾಂಧಿನಗರ ಬಳಿಯ ಲಾಡ್ಜ್ ವೊಂದರಲ್ಲಿ ತಂಗಿದ್ದರು. ಅ.16ರ ಬುಧವಾರ ಮಧ್ಯಾಹ್ನದಿಂದ ಕುಟುಂಬದವರು ಹಾಗೂ ಅಧಿಕಾರಿಗಳ ಫೋನ್ ಕರೆಗೆ ಸಿಗದ ಕಾರಣ, ಬಳಿಕ ಪೊಲೀಸರು ಹುಡುಕಾಟ ನಡೆಸಿದ್ದರು. ಮೊಬೈಲ್ ಲೊಕೇಷನ್ ಚೆಕ್ ಮಾಡಿದಾಗ ಲಾಡ್ಜ್ ನಲ್ಲಿ ಇರುವ ಕುರಿತು ಮಾಹಿತಿ ಲಭ್ಯವಾಗಿತ್ತು.

ಬಳಿಕ ಲಾಡ್ಜ್ ನ ಕೊಠಡಿಗೆ ಹೋಗಿ ನೋಡಿದಾಗ ಜಿ.ಬಿ.ಚಿಕ್ಕನಗೌಡರ್ ಶವವಾಗಿ ಪತ್ತೆಯಾಗಿದ್ದು, ಗುರುವಾರ ಅವರ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇನ್ನು ಜಿ.ಬಿ.ಚಿಕ್ಕನಗೌಡರ್ ಅವರು ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಹಿಂದಿನ ಒಂದು ವರ್ಷದಿಂದ ಜಿ.ಬಿ.ಚಿಕ್ಕನಗೌಡರ್ ತೀರ್ಥಹಳ್ಳಿಯಲ್ಲಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು ಎನ್ನಲಾಗಿದೆ. ಸದ್ಯ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News