ಇದೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್ ನ್ಯಾಯಮೂರ್ತಿಗಳು
ಬೆಂಗಳೂರು : ಇದೇ ಮೊದಲ ಬಾರಿಗೆ ಹೈಕೋರ್ಟ್ ನ್ಯಾಯಮೂರ್ತಿಗಳಾದ ಕೃಷ್ಣ ಎಸ್.ದೀಕ್ಷಿತ್ ಮತ್ತು ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ಪೀಠವು ಕನ್ನಡದಲ್ಲೇ ತೀರ್ಪು ಪ್ರಕಟಿಸುವ ಮೂಲಕ ಇತಿಹಾಸ ಬರೆದಿದೆ.
ನಿನ್ನೆ(ಡಿ.11) ಭಾರತ ಭಾಷಾ ದಿನವಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ಐತಿಹಾಸಿಕ ನಿರ್ಧಾರವನ್ನು ಇಂದು(ಡಿ.12) ಕಾರ್ಯಗತಗೊಳಿಸಿದೆ.
ಇದರೊಂದಿಗೆ ಹೈಕೋರ್ಟ್‌ನಲ್ಲಿ ಕನ್ನಡಕ್ಕೆ ಆದ್ಯತೆ ದೊರೆಯಬೇಕು ಎಂಬ ಬಹು ವರ್ಷಗಳ ಕೂಗಿಗೆ ಇದು ನಾಂದಿಹಾಡಿದೆ. ತುಮಕೂರಿನ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯಲ್ಲಿರುವ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ನಂವುಧೂತ ಸ್ವಾಮೀಜಿ(ವರ್ಸಸ್ ಎಸ್ ಲಿಂಗಣ್ಣ ಮತ್ತು ಇತರರು) ಅವರು ಸಲ್ಲಿಸಿದ್ದ ಮೂಲ ಮೇಲ್ಮನವಿಯನ್ನು (ಒರಿಜನಲ್ ಸೈಡ್ ಅಪೀಲ್) ಪೀಠವು ಪುರಸ್ಕರಿಸಿದೆ.
ಈ ಪ್ರಕರಣದ ತೀರ್ಪನ್ನು ಇಂಗ್ಲಿಷ್ ಮತ್ತು ಕನ್ನಡದಲ್ಲಿ ಪ್ರತ್ಯೇಕವಾಗಿ ನ್ಯಾಯಮೂರ್ತಿಗಳು ಬರೆದಿದ್ದಾರೆ. ತೀರ್ಪಿನ ಆಪರೇಟಿವ್ ಭಾಗವನ್ನು ನ್ಯಾ.ದೀಕ್ಷಿತ್ ಅವರು ಕನ್ನಡದಲ್ಲಿ ಓದುವ ಮೂಲಕ ಹೊಸ ಭಾಷ್ಯ ಬರೆದಿದ್ದಾರೆ.