ಲೋಕಸಭೆ ಚುನಾವಣೆಗೆ ಈ ಫಲಿತಾಂಶ ಸ್ಪಷ್ಟ ದಿಕ್ಸೂಚಿ: ಮಾಜಿ ಸಿಎಂ ಕುಮಾರಸ್ವಾಮಿ

Update: 2023-12-03 16:24 GMT

ಬೆಂಗಳೂರು: ಪ್ರಧಾನಿ ಮೋದಿಯವರ ಬಲಿಷ್ಠ ನಾಯಕತ್ವದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಗೆ ಈ ಫಲಿತಾಂಶ ಸ್ಪಷ್ಟ ದಿಕ್ಸೂಚಿ ಆಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ರವಿವಾರ ಚುನಾವಣಾ ಫಲಿತಾಂಶದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಹಾಕಿದ್ದು, ಮಧ್ಯಪ್ರದೇಶ, ಛತ್ತೀಸಗಢ ಹಾಗೂ ರಾಜಸ್ತಾನ ರಾಜ್ಯಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಹಾಗೂ ಆ ಪಕ್ಷದ ಎಲ್ಲ ನಾಯಕರಿಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು ಎಂದು ತಿಳಿದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News