ಧರ್ಮದ ಹೆಸರಲ್ಲಿ ರಾಜಕೀಯ ದ್ವೇಷ ಹರಡುವವರು ತಮ್ಮ ಕೆಟ್ಟ ಪ್ರವೃತ್ತಿಗೆ ಕಡಿವಾಣ ಹಾಕಬೇಕು: ಸಚಿವ ಡಾ.ಮಹದೇವಪ್ಪ

Update: 2024-11-27 11:45 IST
ಧರ್ಮದ ಹೆಸರಲ್ಲಿ ರಾಜಕೀಯ ದ್ವೇಷ ಹರಡುವವರು ತಮ್ಮ ಕೆಟ್ಟ ಪ್ರವೃತ್ತಿಗೆ ಕಡಿವಾಣ ಹಾಕಬೇಕು: ಸಚಿವ ಡಾ.ಮಹದೇವಪ್ಪ

ಸಚಿವ ಎಚ್.ಸಿ ಮಹದೇವಪ್ಪ (Pic credti: Facebook)

  • whatsapp icon

ಬೆಂಗಳೂರು: ''ದೇಶದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು'' ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ನೀಡಿರುವ ಹೇಳಿಕೆಗೆ ಸಚಿವ ಎಚ್.ಸಿ ಮಹದೇವಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಧರ್ಮದ ಹೆಸರಲ್ಲಿ ರಾಜಕೀಯ ದ್ವೇಷ ಹರಡುವ ಇಂಥವರು ಇನ್ನಾದರೂ ತಮ್ಮ ಕೆಟ್ಟ ಪ್ರವೃತ್ತಿಗೆ ಕಡಿವಾಣ ಹಾಕಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಚಂದ್ರಶೇಖರ ಸ್ವಾಮೀಜಿ ಹೇಳಿಕೆಯನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ ಹಂಚಿಕೊಂಡಿರುವ ಸಚಿವ ಡಾ.ಮಹದೇವಪ್ಪ, "ಮತೀಯ ಶಕ್ತಿಗಳ ವಿರುದ್ಧ ಅಷ್ಟೊಂದು ಹೋರಾಟ ನಡೆಸಿದ ಬಾಬಾ ಸಾಹೇಬರು ಒಂದು ಮತ ಒಂದು ಮೌಲ್ಯವನ್ನು ಜಾರಿ ಮಾಡಿದ ಕಾರಣವನ್ನು ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಇನ್ನಾದರೂ ಅರ್ಥ ಮಾಡಿಕೊಳ್ಳಬೇಕು" ಎಂದು ಹೇಳಿದ್ದಾರೆ.

"ಇನ್ನು ಧರ್ಮದ ಹೆಸರಲ್ಲಿ ರಾಜಕೀಯ ದ್ವೇಷ ಹರಡುವ ಇಂತವರು ತಮ್ಮ ಕೆಟ್ಟ ಪ್ರವೃತ್ತಿಗೆ ಕಡಿವಾಣ ಹಾಕಬೇಕು" ಎಂದು ಅವರು ಆಗ್ರಹಿಸಿದ್ದಾರೆ. 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News