ಟಿಕೆಟ್ ರಹಿತ ಪ್ರಯಾಣ; 4.46 ಲಕ್ಷ ರೂ. ದಂಡ ವಸೂಲಿ ಮಾಡಿದ KSRTC
Update: 2023-08-29 06:33 GMT
ಬೆಂಗಳೂರು: ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕಗೊಳಿಸಿದ್ದು, ಜಲೈ ತಿಂಗಳಲ್ಲಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸವ 43698 ವಾಹನಗಳನ್ನು ತನಿಖೆಗೊಳಪಡಿಸಿ 2748 ಪ್ರಕರಣಗಳನ್ನು ಪತ್ತೆಹಚ್ಚಿದೆ.
ವಿವಿಧ ಪ್ರಕರಣಗಳಲ್ಲಿ 2832 ಟಿಕೆಟ್ ರಹಿತ ಪ್ರಯಾಣಿಕರಿಂದ 446,853/- ರೂಗಳನ್ನು ದಂಡ ದರೂಪದಲ್ಲಿ ವಸೂಲಿ ಮಾಡಲಾಗಿದೆ ಎಂದು KSRTC ನಿಗಮ ತಿಳಿಸಿದೆ.
ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 83,914/- ರೂಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನುಜರುಗಿಸಲಾಗಿದೆ. ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ ನಿಗಮವು ಮನವಿ ಮಾಡಿಕೊಂಡಿದೆ.