ಪದವೀಧರ-ಶಿಕ್ಷಕರ ಕ್ಷೇತ್ರಗಳಿಗೆ ನಾಳೆ (ಜೂ.3) ಚುನಾವಣೆ
ಬೆಂಗಳೂರು : ವಿಧಾನ ಪರಿಷತ್ತಿನ ಮೂರು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಗೆ ನಾಳೆ (ಜೂ.3) ಮತದಾನ ನಡೆಯಲಿದ್ದು, ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ಚುನಾವಣಾ ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ.
ಕರ್ನಾಟಕ ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ಕರ್ನಾಟಕ ನೈಋತ್ಯ ಪದವೀಧರ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳಲ್ಲಿ ನಾಳೆ(ಜೂ.3) ಬೆಳಗ್ಗೆ 8ರಿಂದ ಮಧ್ಯಾಹ್ನ 4 ಗಂಟೆಯ ವರೆಗೆ ಮತದಾನ ನಡೆಯಲಿದ್ದು, ಆರು ಕ್ಷೇತ್ರಗಳಲ್ಲಿ ಪಕ್ಷೇತರರು ಸೇರಿದಂತೆ ಒಟ್ಟು 78 ಅಭ್ಯರ್ಥಿಗಳು ಸ್ಪರ್ಧಾಕಣದಲ್ಲಿದ್ದಾರೆ.
461 ಮತದಾನ ಕೇಂದ್ರಗಳು: ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ-47, ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ-79, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ-44, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ-159, ಈಶಾನ್ಯ ಪದವೀಧರ ಕ್ಷೇತ್ರದಲ್ಲಿ-194, ನೈಋತ್ಯ ಪದವೀಧರ ಕ್ಷೇತ್ರದಲ್ಲಿ-108 ಸೇರಿ ಒಟ್ಟು 461 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.