ಇಂದಿನಿಂದ ಹೊಸ ಶಾಸಕರಿಗೆ ತರಬೇತಿ ಶಿಬಿರ: ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ

Update: 2023-06-26 08:28 GMT

ಬೆಂಗಳೂರು, ಜೂನ್ 26: ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ನೆಲಮಂಗಲ ತಾಲ್ಕಿಲೂನ, ಕುಣಿಗಲ್ ಬೈಪಾಸ್ ರಸ್ತೆಯ, ಮಹದೇವಪುರದಲ್ಲಿರುವ ಎಸ್‌ಡಿಎಂ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸ‌ಸ್‌-ಕ್ಷೇಮವನದಲ್ಲಿ 16 ನೇ ವಿಧಾನಸಭೆಯ ನೂತನ ಸದಸ್ಯರುಗಳಿಗೆ ಇಂದಿನಿಂದ ಮೂರು ದಿನಗಳವರೆಗೆ (2023ರ ಜೂನ್ 26 ರಿಂದ 28 ರವರೆಗೆ) ಏರ್ಪಡಿಸಲಾದ ತರಬೇತಿ ಶಿಬಿರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ.ಎಸ್.ಹೊರಟ್ಟಿ, ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್, ಕಾನೂನು, ನ್ಯಾಯ, ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್, ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ, ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಸುರೇಂದ್ರಕುಮಾರ್ ಸೇರಿದಂತೆ ನೂತನ ಶಾಸಕರುಗಳು ಉಪಸ್ಥಿತರಿದ್ದರು.

 ಕಾರ್ಯಕ್ರಮಗಳ ವಿವರ: 

 ಜೂ.26: ಬೆಳಗ್ಗೆ 6ರಿಂದ 9ರವರೆಗೆ ಆರೋಗ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳು ನಡೆಯಲಿವೆ. ಬೆಳಗ್ಗೆ 10ರಿಂದ ಸಂಜೆಯ ವರೆಗೆ ಹಿರಿಯ ಸದಸ್ಯರು ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಿದ್ದಾರೆ. 'ಸದನದಲ್ಲಿ ಸದಸ್ಯರ ಭಾಗವಹಿಸುವಿಕೆ, ವಹಿಸಲಿದ್ದಾರೆ.

ಕೌಶಲ್ಯ ವೃದ್ಧಿ' ವಿಷಯದ ಕುರಿತು ಸಚಿವರಾದ ಎಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ ಉಪನ್ಯಾಸ ನೀಡಲಿದ್ದಾರೆ. 'ರಾಜ್ಯಪಾಲರ ಭಾಷಣ ಮತ್ತು ಬಜೆಟ್ ಭಾಷಣ ಪ್ರಕ್ರಿಯೆ' ಕುರಿತು ಬಿ.ಎಲ್. ಶಂಕರ್ ಮಾತನಾಡಲಿದ್ದಾರೆ. ಸಂಜೆ 6ರಿಂದ 7ಗಂಟೆಯ ವರೆಗೆ ಬ್ರಹ್ಮಕುಮಾರೀಸ್ ಸಂಸ್ಥೆಯ ಬಿ.ಕೆ.ವೀಣಾ ಮತ್ತು ಬಿ.ಕೆ.ಭುವನೇಶ್ವ ಅವರು 'ಹಿತವಚನ' ನೀಡಲಿದ್ದಾರೆ. 27ರ ಸಂಜೆ 4ರಿಂದ 5:30ರ ವರೆಗೆ ಡಾ.ವೀರೇಂದ್ರ ಹೆಗ್ಗಡೆ ಅವರು 'ಸಾಮರಸ್ಯ ಸಮಾಜ, ಅಭಿವೃದ್ಧಿ ಕರ್ನಾಟಕ, ಬಲಿಷ್ಠ ಭಾರತ ನಿರ್ಮಾಣದಲ್ಲಿ ಶಾಸಕರ ಪಾತ್ರ'ದ ಬಗ್ಗೆ ಭಾಷಣ ಮಾಡಲಿದ್ದಾರೆ. ಜೂ.28ಕ್ಕೆ ಮಹಮ್ಮದ್ ಕುಂಞ ಅವರು ಜನಪ್ರತಿನಿಧಿಗಳು ಮತ್ತು ಜನರ ಮಧ್ಯೆ ಬಾಂಧವ್ಯದ ವೃದ್ಧಿ ವಿಚಾರದ ಬಗ್ಗೆ ಮಾತನಾಡಲಿದ್ದಾರೆ. ಅಂದು ಸಂಜೆ ಜರುಗಲಿರುವ ಸಮಾರೋಪ ಸಮಾರಂಭದಲ್ಲಿ ಡಿಸಿಎಂ ಸಮಾರೋಪ ಭಾಷಣ ಮಾಡಲಿದ್ದಾರೆ. 

 

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News