35 ಹಿರಿಯ ಐಪಿಎಸ್‌ ಅಧಿಕಾರಿಗಳ ವರ್ಗಾವಣೆ: ಸಂಪೂರ್ಣ ಪಟ್ಟಿ ಇಲ್ಲಿದೆ...

Update: 2023-09-05 10:58 GMT

ಸಾಂದರ್ಭಿಕ ಚಿತ್ರ

ಬೆಂಗಳೂರು: 35 ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.

 ಸಂಪೂರ್ಣ ಪಟ್ಟಿ ಇಲ್ಲಿದೆ...

1) ಅನುಪಮ್ ಅಗರ್ವಾಲ್ ಅವರನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

2) ಬೆಂಗಳೂರು ನಗರ ಅಪರಾಧ ವಿಭಾಗದ ಆಯುಕ್ತರಾಗಿದ್ದ ಐಪಿಎಸ್ ಅಧಿಕಾರಿ ಡಾ. ಶರಣಪ್ಪ ಎಸ್.ಡಿ ಅವರನ್ನು ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇದರ ಡಿಐಜಿಪಿ ಮತ್ತು ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.

3) ರಾಜ್ಯ ಅಪರಾಧ ದಾಖಲೆ ಬ್ಯೂರೋದ ವರಿಷ್ಠಾಧಿಕಾರಿಯಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಅವರನ್ನು ಬೆಂಗಳೂರು ಆಂತರಿಕ ಭದ್ರತಾ ವಿಭಾಗದ ಎಸ್.ಪಿ ಆಗಿ ವರ್ಗಾಯಿಸಲಾಗಿದೆ.

4) ರಾಮನಗರ ಎಸ್ಪಿಯಾಗಿದ್ದ ಐಪಿಎಸ್ ಅಧಿಕಾರಿ ಕಾರ್ತಿಕ್ ರೆಡ್ಡಿ ಅವರನ್ನು ಬೆಂಗಳೂರು ಸಂಚಾರ ದಕ್ಷಿಣ ವಿಭಾಗದ ಡಿಸಿಪಿ ಆಗಿ ವರ್ಗಾಯಿಸಲಾಗಿದೆ.

5) ಗುಪ್ತಚರ ವಿಭಾಗದ ಎಸ್ಪಿಯಾಗಿದ್ದ ಸಂತೋಷ್ ಬಾಬು ಅವರನ್ನು ಬೆಂಗಳೂರು ನಗರದ ಆಡಳಿತ ವಿಭಾಗದ ಡಿಸಿಪಿ ಆಗಿ ವರ್ಗಾಯಿಸಲಾಗಿದೆ.

6) ಅಪರಾಧ ವಿಭಾಗದ ಡಿಸಿಪಿಯಾಗಿದ್ದ ಯತೀಶ್ ಚಂದ್ರ ಜಿ.ಎಚ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಸ್ಪಿಯಾಗಿ ನೇಮಕ ಮಾಡಲಾಗಿದೆ.

7) ಬೆಂಗಳೂರು ನಗರ ಪೂರ್ವ ವಿಭಾಗದ ಡಿಸಿಪಿಯಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಡಾ. ಭೀಮಾಶಂಕರ್ ಗುಳೇದ್ ಅವರನ್ನು ಬೆಳಗಾವಿಯ ಪೊಲೀಸ್ ಎಸ್ಪಿಯಾಗಿ ವರ್ಗಾಯಿಸಲಾಗಿದೆ.

8) ಕಾರ್ಕಳ ನಕ್ಸಲ್ ನಿಗ್ರಹದಳದ ಎಸ್ಪಿಯಾಗಿದ್ದ ಪಿಎಸ್ ಅಧಿಕಾರಿ ನಿಕಂ ಪ್ರಕಾಶ್ ಅಮೃತ್ ಅವರನ್ನು ಪೊಲೀಸ್ ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗಾಯಿಸಲಾಗಿದೆ.

9) ತುಮಕೂರು ಜಿಲ್ಲಾ ಪೊಲೀಸ್ ಎಸ್ಪಿಯಾಗಿದ್ದ ಐಪಿಎಸ್ ಅಧಿಕಾರಿ ರಾಹುಲ್ ಕುಮಾರ್ ಶಹಪುರವಾಡ್ ಅವರನ್ನು ಬೆಂಗಳೂರು ನಗರ ದಕ್ಷಿಣ ವಿಭಾಗದ ಡಿಸಿಪಿಯಾಗಿ ನೇಮಿಸಲಾಗಿದೆ.

10) ಐಪಿಎಸ್ ಅಧಿಕಾರಿ ಡಿ. ದೇವರಾಜ್ ಅವರನ್ನು ಬೆಂಗಳೂರು ನಗರ ಪೂರ್ವ ವಿಭಾಗದ ಡಿಸಿಪಿಯಾಗಿ ನೇಮಿಸಲಾಗಿದೆ.

11) ಕರಾವಳಿ ಕಾವಲು ಪಡೆಯ ಎಸ್ಪಿಯಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಬ್ದುಲ್ ಅಹದ್ ಅವರನ್ನು ಬೆಂಗಳೂರಿನ ಕೇಂದ್ರ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಲಾಗಿದೆ.

12) ವೈಟ್ ಫೀಲ್ಡ್ ನ ಡಿಸಿಪಿಯಾಗಿದ್ದ ಎಸ್.ಗಿರೀಶ್ ಅವರನ್ನು ಬೆಂಗಳೂರು ನಗರ ಪಶ್ಚಿಮ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಲಾಗಿದೆ.

13) ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸಂಜೀವ್ ಎಂ.ಪಾಟೀಲ್ ಅವರನ್ನು ಬೆಂಗಳೂರು ನಗರ ವೈಟ್ ಫೀಲ್ಡ್ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಲಾಗಿದೆ.

14) ಐಪಿಎಸ್ ಅಧಿಕಾರಿ ಕೆ. ಪರಶುರಾಮ ಅವರನ್ನು ಗುಪ್ತಚರ ವಿಭಾಗದ ಪೊಲೀಸ್ ಎಸ್ಪಿಯಾಗಿ ನೇಮಕ ಮಾಡಲಾಗಿದೆ.

15) ವಿಜಯಪುರ ಜಿಲ್ಲೆ ಎಸ್ಪಿಯಾಗಿದ್ದ ಎಚ್.ಡಿ. ಆನಂದ ಕುಮಾರ್, ಐಪಿಎಸ್ ಅವರನ್ನು ನಾಗರಿಕ ಹಕ್ಕುಗಳು ಮತ್ತು ಜಾರಿ ನಿರ್ದೇಶನಾಲಯದ ಎಸ್ಪಿಯಾಗಿ ನೇಮಕ ಮಾಡಲಾಗಿದೆ.

16) ಬೆಂಗಳೂರು ನಗರ ಪಶ್ಚಿಮ ವಿಭಾಗದ ಟ್ರಾಫಿಕ್ ಡಿಸಿಪಿಯಾಗಿದ್ದ ಡಾ. ಸುಮನ್ ಡಿ. ಪೆನ್ನೇಕರ್ ಅವರನ್ನು ಪ್ರಧಾನ ಕಚೇರಿಯ ಎಐಜಿಪಿ ಆಗಿ ನೇಮಕ ಮಾಡಲಾಗಿದೆ.

17) ಗುಪ್ತಚರ ವಿಭಾಗದ ಪೊಲೀಸ್ ಎಸ್ಪಿಯಾಗಿದ್ದ ಡೆಕ್ಕ ಕಿಶೋರ್ ಬಾಬು ಅವರನ್ನು ಕಲಬುರ್ಗಿ ಪೊಲೀಸ್ ತರಬೇತಿ ಕೇಂದ್ರದ ಎಸ್ಪಿ ಮತ್ತು ಪ್ರಿನ್ಸಿಪಲ್ ಆಗಿ ನೇಮಕ ಮಾಡಲಾಗಿದೆ.

18) ರಾಜ್ಯ ಮೀಸಲು ಪೊಲೀಸ್ 1ನೇ ಬೆಟಾಲಿಯನ್ ಇದರ ಕಮಾಂಡೆಂಟ್ ಆಗಿದ್ದ ಡಾ. ಕೋನ ವಂಶಿ ಕೃಷ್ಣ ಅವರನ್ನು ಬೆಂಗಳೂರು ಕಮಾಂಡ್ ಸೆಂಟರ್ ಇದರ ಡಿಸಿಪಿಯಾಗಿ ವರ್ಗಾಯಿಸಲಾಗಿದೆ.

19) ಬೆಂಗಳೂರು ನಗರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಐಪಿಎಸ್ ಅಧಿಕಾರಿ ಲಕ್ಷ್ಮಣ್ ನಿಂಬರ್ಗಿ ಅವರನ್ನು ರಾಜ್ಯ ಅಪರಾಧ ದಾಖಲೆ ಬ್ಯೂರೋದ ಎಸ್ಪಿಯಾಗಿ ನೇಮಿಸಲಾಗಿದೆ.

20) ಕಲಬುರ್ಗಿ ಪೊಲೀಸ್ ತರಬೇತಿ ಕೇಂದ್ರದ ಎಸ್ಪಿ ಮತ್ತು ಪ್ರಿನ್ಸಿಪಲ್ ಆಗಿದ್ದ ಅರುಣ್ ಕೆ ಅವರನ್ನು ಉಡುಪಿ ಜಿಲ್ಲಾ ಎಸ್ಪಿಯಾಗಿ ನೇಮಿಸಲಾಗಿದೆ.

21) ಬೆಂಗಳೂರು ನಗರ ದಕ್ಷಿಣ ವಿಭಾಗದ ಡಿಸಿಪಿಯಾಗಿದ್ದ ಐಪಿಎಸ್ ಅಧಿಕಾರಿ ಮುಹಮ್ಮದ್ ಸುಜೀತಾ ಎಂ.ಎಸ್ ಅವರನ್ನು ಹಾಸನ ಜಿಲ್ಲಾ ಎಸ್ಪಿಯಾಗಿ ವರ್ಗಾಯಿಸಲಾಗಿದೆ.

22) ಬಾಗಲಕೋಟೆ ಜಿಲ್ಲಾ ಎಸ್ಪಿಯಾಗಿದ್ದ ಜಯಪ್ರಕಾಶ್ ಅವರನ್ನು ಗುಪ್ತಚರ ವಿಭಾಗದ ಎಸ್ಪಿಯಾಗಿ ನೇಮಿಸಲಾಗಿದೆ.

23) ಐಪಿಎಸ್ ಅಧಿಕಾರಿ ಶೇಖರ್ ಹೆಚ್. ತೆಂಕಣ್ಣವರ್ ಅವರನ್ನು ಬೆಂಗಳೂರು ನಗರ ಅಪರಾಧ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.

24) ಕ್ರಿಮಿನಲ್ ತನಿಖಾ ಇಲಾಖೆಯ ಎಸ್ಪಿಯಾಗಿದ್ದ ಸಾರಾ ಫಾತಿಮಾ ಅವರನ್ನು ಬೆಂಗಳೂರು ನಗರದ ಟ್ರಾಫಿಕ್ ಪೂರ್ವ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಲಾಗಿದೆ.

25) ಗುಪ್ತಚರ ವಿಭಾಗದ ಎಸ್ಪಿಯಾಗಿದ್ದ ಐಪಿಎಸ್ ಅಧಿಕಾರಿ ಸೋನಾವನೆ ರಿಷಿಕೇಶ್ ಭಗವಾನ್ ಅವರನ್ನು ವಿಜಯಪುರ ಜಿಲ್ಲಾ ಎಸ್ಪಿಯಾಗಿ ನೇಮಿಸಲಾಗಿದೆ.

26) ಐಪಿಎಸ್ ಅಧಿಕಾರಿ ಲೋಕೇಶ್ ಭರಮಪ್ಪ ಜಗಲಾಸರ್ ಅವರನ್ನು ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇದರ ಎಸ್ಪಿ ಮತ್ತು ಉಪ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

27) ಬೆಂಗಳೂರು ನಗರ ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಶ್ರೀನಿವಾಸ್ ಗೌಡ ಅವರನ್ನು ಬೆಂಗಳೂರು ನಗರ ಅಪರಾಧ ವಿಭಾಗ-2 ರ ಡಿಸಿಪಿಯಾಗಿ ನೇಮಿಸಲಾಗಿದೆ.

28) ಬೆಂಗಳೂರು ನಗರ ದಕ್ಷಿಣ ವಿಭಾಗದ ಡಿಸಿಪಿಯಾಗಿದ್ದ ಐಪಿಎಸ್ ಅಧಿಕಾರಿ ಪಿ.ಕೃಷ್ಣಕಾಂತ್ ಅವರನ್ನು ಎಐಜಿಪಿ ಆಗಿ ನೇಮಿಸಲಾಗಿದೆ.

29) ಕಲಬುರಗಿ ಜಿಲ್ಲಾ ಗುಪ್ತಚರ ವಿಭಾಗದ ಎಸ್ಪಿಯಾಗಿದ್ದ ಐಪಿಎಸ್ ಅಧಿಕಾರಿ ಅಮರನಾಥ ರೆಡ್ಡಿ ವೈ. ಅವರನ್ನು ಬಾಗಲಕೋಟೆ ಜಿಲ್ಲಾ ಎಸ್ಪಿಯಾಗಿ ವರ್ಗಾಯಿಸಲಾಗಿದೆ.

30) ಹಾಸನ ಜಿಲ್ಲಾ ಎಸ್ಪಿಯಾಗಿದ್ದ ಹರಿರಾಮ್ ಶಂಕರ್ ಅವರನ್ನು ಗುಪ್ತಚರ ವಿಭಾಗದ ಎಸ್ಪಿಯಾಗಿ ನೇಮಿಸಲಾಗಿದೆ.

31) ಕಲಬುರ್ಗಿ ಜಿಲ್ಲಾ ಕಾನೂನು ಮತ್ತು ಆದೇಶ ವಿಭಾಗದ ಡಿಸಿಪಿಯಾಗಿದ್ದ ಐಪಿಎಸ್ ಅಧಿಕಾರಿ ಅಡ್ಡೂರು ಶ್ರೀನಿವಾಸುಲು ಅವರನ್ನು ಕಲಬುರಗಿ ಜಿಲ್ಲಾ ಎಸ್ಪಿಯಾಗಿ ನೇಮಿಸಲಾಗಿದೆ.

32)ಅಂಶು ಕುಮಾರ್ ಐಪಿಎಸ್ ಅವರನ್ನು ಉಡುಪಿ ಜಿಲ್ಲಾ ಕರಾವಳಿ ಕಾವಲು ಪಡೆಯ ಎಸ್ಪಿಯಾಗಿ ನೇಮಿಸಲಾಗಿದೆ.

33) ಅಪರಾಧ ತನಿಖಾ ವಿಭಾಗದ ಎಸ್ಪಿಯಾಗಿದ್ದ ಐಪಿಎಸ್ ಅಧಿಕಾರಿ ಕನಿಕಾ ಸಿಕ್ರಿವಾಲ್ ಅವರನ್ನು ಕಲಬುರ್ಗಿ ಜಿಲ್ಲಾ ಕಾನೂನು ಮತ್ತು ಆದೇಶ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.

34) ಗುಪ್ತಚರ ವಿಭಾಗದ ಎಸ್ಪಿಯಾಗಿದ್ದ ಕುಶಾಲ್ ಚೌಕ್ಸೆ, ಐಪಿಎಸ್ ಅವರನ್ನು ಬೆಂಗಳೂರು ವಿಧಿವಿಜ್ಞಾನ (ಫೋರೆನ್ಸಿಕ್) ಪ್ರಯೋಗಾಲಯ ಇದರ ಜಂಟಿ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

35) ಬೆಂಗಳೂರು ನಗರ ಕಮಾಂಡ್ ಸೆಂಟರ್ ನ ಡಿಸಿಪಿಯಾಗಿದ್ದ ರವೀಂದ್ರ ಕಾಶಿನಾಥ್ ಗದಾಡಿ ಅವರನ್ನು ಗುಪ್ತಚರ ವಿಭಾಗದ ಎಸ್ಪಿಯಾಗಿ ನೇಮಕ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News