ಐಎಎಸ್-ಐಪಿಎಸ್ ಅಧಿಕಾರಿಗಳ ವರ್ಗಾವಣೆ

Update: 2025-01-02 15:10 GMT

ಬೆಂಗಳೂರು : ರಾಜ್ಯ ಸರಕಾರವು ನಾಲ್ವರು ಐಎಎಸ್ ಹಾಗೂ ಓರ್ವ ಐಪಿಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.

ಅಬಕಾರಿ ಇಲಾಖೆಯ ಆಯುಕ್ತ ಡಾ.ಜೆ.ರವಿಶಂಕರ್ ಅವರನ್ನು ಕೃಷಿ ಇಲಾಖೆಯ ಸರಕಾರದ ಕಾರ್ಯದರ್ಶಿ, ಕೃಷಿ ಇಲಾಖೆಯ ಸರಕಾರದ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರನ್ನು ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಸಾರ್ಟಿಸಿ)ದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ(ವೆಚ್ಚ) ಆರ್.ವೆಂಕಟೇಶ್ ಕುಮಾರ್ ಅವರನ್ನು ಅಬಕಾರಿ ಇಲಾಖೆ ಆಯುಕ್ತ ಹಾಗೂ ರಾಜ್ಯ ಗೃಹ ಮಂಡಳಿಯ ಆಯುಕ್ತ ಅಕ್ರಮ್ ಪಾಷ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಐಪಿಎಸ್: ಸಿಸಿಬಿ ವಿಭಾಗದ ಡಿಸಿಪಿ ಆರ್.ಶ್ರೀನಿವಾಸ್ ಗೌಡ ಅವರನ್ನು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News