ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2023-08-08 15:06 GMT

ಬೆಂಗಳೂರು, ಆ.8: ಪುನರ್ ವಸತಿ ಹಾಗೂ ಪುನರ್ ನಿರ್ಮಾಣ ಇಲಾಖೆಯ ಆಯುಕ್ತ ಮುಹಮ್ಮದ್ ಮೊಹ್ಸಿನ್ ಅವರನ್ನು ಕಾರ್ಮಿಕ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಯಾಗಿ, ಜವಳಿ ಅಭಿವೃದ್ಧಿ ಇಲಾಖೆಯ ಆಯುಕ್ತ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆಯ ನಿರ್ದೇಶಕ ಟಿ.ಎಚ್.ಎಂ.ಕುಮಾರ್ ಅವರನ್ನು ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಗುಲ್ಬರ್ಗ ವಿದ್ಯುತ್ ಸರಬರಾಜು ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಪಾಂಡ್ವೆ ರಾಹುಲ್ ತುಕಾರಾಮ್ ಅವರನ್ನು ರಾಯಚೂರು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸೋಮಶೇಖರ್ ಎಸ್.ಜೆ. ಅವರನ್ನು ಚಿತ್ರದುರ್ಗ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿಯುಕ್ತಿ: ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಸ್ನೇಹಲ್ ಆರ್. ಅವರನ್ನು ಬೆಂಗಳೂರು ಮಹಾನಗರ ಸಾರಿಗೆ ನಿಗಮ(ಬಿಎಂಟಿಸಿ)ದ ನಿದೇರ್ಶಕಿ(ಐಟಿ), ಪ್ರಭುಲಿಂಗ ಕಾವಲಕಟ್ಟಿ ಅವರನ್ನು ಪಶುಸಂಗೋಪನಾ ಹಾಗೂ ಪಶುವೈದ್ಯಕೀಯ ಸೇವೆಗಳ ಇಲಾಖೆಯ ಆಯುಕ್ತ, ಲಕ್ಷ್ಮಿಕಾಂತ್ ರೆಡ್ಡಿ ಜಿ. ಅವರನ್ನು ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ರಂಗಪ್ಪ ಎಸ್. ಅವರನ್ನು ಕಂದಾಯ ಇಲಾಖೆಯ ಸಾಮಾಜಿಕ ಭದ್ರತೆ ಹಾಗೂ ಪಿಂಚಣಿ ವಿಭಾಗದ ನಿರ್ದೇಶಕ, ಡಾ.ಆಕಾಶ್ ಎಸ್.ಅವರನ್ನು ಕಲಬುರಗಿ ಜಿಲ್ಲೆಯ ಸಾರ್ವಜನಿಕ ಸೂಚನೆ ಇಲಾಖೆಯ ಹೆಚ್ಚುವರಿ ಆಯುಕ್ತ ಹಾಗೂ ಅನ್ಮೋಲ್ ಜೈನ್ ಅವರನ್ನು ನೋಂದಣಿ(ವಿಚಕ್ಷಣ) ಇಲಾಖೆಯ ಡಿಐಜಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News