ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2023-08-10 16:55 GMT

ಬೆಂಗಳೂರು, ಆ.10: ಆರ್ಥಿಕ ಇಲಾಖೆ(ಬಜೆಟ್ ಹಾಗೂ ಸಂಪನ್ಮೂಲ)ಯ ಕಾರ್ಯದರ್ಶಿ ಡಾ.ಏಕರೂಪ್ ಕೌರ್ ಅವರನ್ನು ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಆರ್ಥಿಕ ಇಲಾಖೆ(ಖರ್ಚು)ಯ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್ ಅವರನ್ನು ಆರ್ಥಿಕ ಇಲಾಖೆ(ಬಜೆಟ್ ಹಾಗೂ ಸಂಪನ್ಮೂಲ)ಯ ಕಾರ್ಯದರ್ಶಿಯಾಗಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿ ಡಾ.ರೇಜು ಎಂ.ಟಿ. ಅವರನ್ನು ಆರ್ಥಿಕ ಇಲಾಖೆ(ಖರ್ಚು)ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News