ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2023-08-18 18:30 GMT

ಬೆಂಗಳೂರು, ಆ.18: ನಗರ ಭೂ ಸಾರಿಗೆ ನಿರ್ದೇಶನಾಲಯದ ಆಯುಕ್ತೆ ಮಂಜುಳಾ ವಿ. ಅವರನ್ನು ರಾಜ್ಯ ಮೇಲ್ಮನವಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ವರ್ಗಾವಣೆ ಮಾಡಲಾಗಿದೆ. ಜೊತೆಗೆ, ಮೈಸೂರಿನಲ್ಲಿರುವ ಆಡಳಿತ ತರಬೇತಿ ಸಂಸ್ಥೆಯ ಪ್ರಧಾನ ನಿರ್ದೇಶಕರನ್ನಾಗಿ ಹೆಚ್ಚುವರಿ ಹೊಣೆ ವಹಿಸಲಾಗಿದೆ.

ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಎಂ.ದೀಪಾ ಅವರನ್ನು ನಗರ ಭೂ ಸಾರಿಗೆ ನಿರ್ದೇಶನಾಲಯದ ಆಯುಕ್ತೆಯನ್ನಾಗಿ ಹಾಗೂ ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಸುಂದರೇಶ್ ಬಾಬು ಎಂ. ಅವರನ್ನು ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಸಾರ್ಟಿಸಿ)ದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News