ಐಎಎಸ್ ಅಧಿಕಾರಿಗಳ ವರ್ಗಾವಣೆ | ರೋಹಿಣಿ ಸಿಂಧೂರಿ ಸೇರಿ ಐವರು ಅಧಿಕಾರಿಗಳಿಗೆ ಸ್ಥಳ ನಿಯೋಜನೆ
ಬೆಂಗಳೂರು, ಸೆ.13: ರಾಜ್ಯ ಸರಕಾರವು ರೋಹಿಣಿ ಸಿಂಧೂರಿ ದಾಸರಿ ಸೇರಿದಂತೆ ಏಳು ಮಂದಿ ಐಎಎಸ್ ಅಧಿಕಾರಿಗಳು ಹಾಗೂ ಇಬ್ಬರು ಐಆರ್ ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ರೋಹಿಣಿ ಸಿಂಧೂರಿ ದಾಸರಿ ಅವರನ್ನು ರಾಜ್ಯಪತ್ರ ಇಲಾಖೆಯ ಮುಖ್ಯ ಸಂಪಾದಕಿಯಾಗಿ, ಪ್ರದೀಪ್ ಪಿ. ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ನಿರ್ದೇಶಕ, ಲತಾ ಕುಮಾರಿ ಅವರನ್ನು ರಾಜ್ಯ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಅಲ್ಲದೆ, ಸಿ.ಎನ್.ಶ್ರೀಧರ ಅವರನ್ನು ಜವಳಿ ಅಭಿವೃದ್ಧಿ ಇಲಾಖೆಯ ಆಯುಕ್ತ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆಯ ನಿರ್ದೇಶಕರಾಗಿ ಹಾಗೂ ಸಂಗಪ್ಪ ಅವರನ್ನು ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ(ಕಿಯೋನಿಕ್ಸ್)ದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ರಾಜ್ಯ ಲೋಕಸೇವಾ ಆಯೋಗದ ಕಾರ್ಯದರ್ಶಿ ಸುರಲ್ಕರ್ ವಿಕಾಸ್ ಕಿಶೋರ್ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪ್ರಾದೇಶಿಕ ವಲಯ ಆಯುಕ್ತ(ರಾಜರಾಜೇಶ್ವರಿ ನಗರ)ರಾಗಿ ಹಾಗೂ ರಾಜ್ಯ ರೇಷ್ಮೆ ಸಂಶೋಧನೆ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕಿ ಶ್ರೀರೂಪಾ ಅವರನ್ನು ರಾಜ್ಯ ಖನಿಜ ನಿಗಮದ ಕಾರ್ಯಕಾರಿ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ.
ಐಆರ್ ಎಸ್: ಬೆಳಗಾವಿಯ ಕಬ್ಬು ಅಭಿವೃದ್ಧಿಯ ವಿಶೇಷ ಆಯುಕ್ತ ಹಾಗೂ ಸಕ್ಕರೆ ನಿರ್ದೇಶಕ ಶಿವಾನಂದ ಕಲಕೇರಿ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ವಿಶೇಷ ಆಯುಕ್ತ(ಹಣಕಾಸು)ರಾಗಿ ಹಾಗೂ ಬಿಬಿಎಂಪಿಯ ವಿಶೇಷ ಆಯುಕ್ತ(ಕಂದಾಯ) ಡಾ.ದೀಪಕ್ ಆರ್. ಎಲ್. ಅವರನ್ನು ಬಿಬಿಎಂಪಿ ಪಶ್ಚಿಮ ವಲಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.