ತುಮಕೂರು | ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ ಆರೋಪ: ಯುವಕನ ಬಂಧನ

Update: 2023-10-05 14:10 IST
ತುಮಕೂರು | ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ ಆರೋಪ: ಯುವಕನ ಬಂಧನ

ಸಾಂದರ್ಭಿಕ ಚಿತ್ರ

  • whatsapp icon

ತುಮಕೂರು: ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ಇತ್ತೀಚೆಗೆ ನಗರದಲ್ಲಿ ಹಮ್ಮಿಕೊಂಡಿದ್ದ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‌ ಐಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. 

ಕುವೆಂಪು ನಗರ 5ನೇ ಕ್ರಾಸ್ ನಿವಾಸಿ ದರ್ಶನ್‌ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. 

ವಿಶ್ವ ಹಿಂದೂ ಪರಿಷತ್‌, ಬಜರಂಗದಳದಿಂದ ಸೆ. 30ರಂದು ನಗರದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಆಯೋಜಿಸಲಾಗಿತ್ತು. ಈ ಮೆರವಣಿಗೆಯಲ್ಲಿ ದರ್ಶನ್‌ ಸಹ ಭಾಗಿಯಾಗಿದ್ದ. ಈ ವೇಳೆ ಕರ್ತವ್ಯದಲ್ಲಿದ್ದ ಮಹಿಳಾ ಸಬ್‌ಇನ್‌ಸ್ಪೆಕ್ಟರ್‌ ಜತೆ ಅನುಚಿತವಾಗಿ ನಡೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ʼನಗರದ ಎಂ.ಜಿ.ರಸ್ತೆಯಲ್ಲಿ ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಎದೆಯ ಭಾಗಕ್ಕೆ ಕೈಹಾಕಿ ಎಳೆದಿರುವʼ ಬಗ್ಗೆ ಮಹಿಳಾ ಪಿಎಸ್‌ಐ ದೂರು ನೀಡಿದ್ದರು. ಈ ದೂರಿನ ಮೇರೆಗೆ ಆರೋಪಿ ದರ್ಶನ್‌ ನನ್ನು ನಿನ್ನೆ (ಬುಧವಾರ) ಪೊಲೀಸರು ಬಂಧಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News