ತುಮಕೂರು: ಕಾರು - ಲಾರಿ ಮುಖಾಮುಖಿ ಢಿಕ್ಕಿ, ಸ್ಥಳದಲ್ಲೇ ಮೂವರು ಮೃತ್ಯು

Update: 2023-09-26 07:05 GMT

ತುಮಕೂರು: ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಮಂಗಳವಾರ ಬೆಳಗ್ಗೆ ವರದಿಯಾಗಿದೆ. 

ಮೃತರನ್ನು 20 ವರ್ಷದ ಆಕಾಶ್, 28 ವರ್ಷದ ಹೇಮಂತ್ ಮತ್ತು ಶಿವಕುಮಾರ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಪಾವಗಡ ಕಡೆಗೆ ಬರುತ್ತಿದ್ದ ಕಾರು, ಪಾವಗಡದಿಂದ ತುಮಕೂರಿನ ಕಡೆಗೆ ಹೋಗುತ್ತಿದ್ದ ಲಾರಿ ಮುಖಾಮುಖಿ ಢಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.  ಕಾರಿನಲ್ಲಿದ್ದವರು ಪಾವಗಡ ಮೂಲದವರು ಎಂದು ತಿಳಿದುಬಂದಿದೆ.

ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News