ಚಂದ್ರಯಾನ-3 ಯಶಸ್ಸಿನ ಹಿಂದೆ ಬೆಳಗಾವಿಯ ಇಬ್ಬರು ವಿಜ್ಞಾನಿಗಳು

Update: 2023-08-23 19:06 GMT

    ಪ್ರಕಾಶ್ ಪಡ್ನೇಕರ್‌  | ಶಿವಾನಂದ ಮಲ್ಲಪ್ಪ

ಬೆಳಗಾವಿ: ಭಾರತೀಯ ಬಾಹ್ಯಾಕಾಶ ವಿಜ್ಞಾನದ ಮುನ್ನಡೆಯ ಪ್ರತೀಕ, ದೇಶದ ಹೆಮ್ಮೆಯ ಇಸ್ರೋದ ಚಂದ್ರಯಾನ ಸರಣಿಯ ಮೂರನೇ ಯಾನದ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವ ಮೇಲ್ಮೈನಲ್ಲಿ ಇಳಿದಿದೆ. ಈ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ.

ಈ ಯಶಸ್ಸಿನ ಹಿಂದೆ ಅಸಂಖ್ಯಾತ ವಿಜ್ಞಾನಿಗಳು ಹಾಗೂ ವಿವಿಧ ಅತ್ಯಾಧುನಿಕ ಎಲೆಕ್ಟ್ರಾನಿಕ್‌ ಉಪಕರಣಗಳು ಅಡಗಿವೆ. ಇದರಲ್ಲಿ ಬೆಳಗಾವಿಯ ಸರ್ವೋ ಕಂಟ್ರೋಲ್ಸ್‌ ಏರೋಸ್ಪೇಸ್‌ ಮತ್ತು ಟೆಕ್ನಾಲಾಜಿ ಪ್ರೈವೆಟ್‌ ಲಿಮಿಟೆಡ್‌ ಕಂಪೆನಿ ತಯಾರಿಸಿದ ವಿವಿಧ ಎಲೆಕ್ಟ್ರಾನಿಕ್‌ ಉಪಕರಣಗಳು, ಬಿಡಿ ಭಾಗಗಳನ್ನು ಬಳಸಲಾಗಿದೆ. ಜತೆಗೆ ಜಿಲ್ಲೆಯ ಇಬ್ಬರು ವಿಜ್ಞಾನಿಗಳು ಕೂಡ ಈ ತಂಡದ ಸದಸ್ಯರಾಗಿದ್ದಾರೆ.

ಖಾನಾಪುರ ತಾಲೂಕಿನ ಕಾಪೋಲಿ ಗ್ರಾ.ಪಂ. ವ್ಯಾಪ್ತಿಯ ಅನಗಡಿ ಗ್ರಾಮದ ಯುವ ವಿಜ್ಞಾನಿಕ ಪ್ರಕಾಶ ನಾರಾಯಣ ಪಡನೇಕರ್‌ ಮತ್ತು ಗೋಕಾಕ ತಾಲೂಕಿನ ಮಮದಾಪುರ ಗ್ರಾಮದ ಶಿವಾನಂದ ಮಲ್ಲಪ್ಪ ಕಮತ ಎಂಬವರ ಶ್ರಮವೂ ಇದೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅನಗಡಿ ಗ್ರಾಮದ ಪ್ರಕಾಶ್ ಪಡ್ನೇಕರ್ ಎಂಬ ಯುವ ವಿಜ್ಞಾನಿ ಚಂದ್ರಯಾನ 3 ಮಿಷನ್‌ನಲ್ಲಿ ಕೆಲಸ ಮಾಡಿದವರು. ಅಲ್ಲದೇ, ಚಂದ್ರಯಾನ 2ರಲ್ಲಿಯೂ ಇವರು ಕೆಲಸ ಮಾಡಿದ್ದರು. ಕಳೆದ ಐದು ವರ್ಷಗಳಿಂದ ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

52 ವರ್ಷದ ವಿಜ್ಞಾನಿ ಶಿವಾನಂದ ಮಲ್ಲಪ್ಪ ಕಮತ ಬಡ ಕುಟುಂಬದಲ್ಲಿ ಹುಟ್ಟಿ, ಬೆಳೆದವರು. ಹಳ್ಳಿಯಲ್ಲೇ ಆರಂಭಿಕ ಶಿಕ್ಷಣ ಪೂರೈಸಿ, ಬೆಳಗಾವಿಯ ಜಿಐಟಿಯಲ್ಲಿ ಎಂಜಿನಿಯರಿಂಗ್‌ ಪದವಿ ಪಡೆದಿದ್ದಾರೆ. ಹಲವು ವರ್ಷಗಳಿಂದ ಇಸ್ರೊದ ವಿಜ್ಞಾನಿಗಳ ತಂಡದ ಸಕ್ರಿಯ ಸದಸ್ಯರಾಗಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News