ಸನಾತನ ಧರ್ಮದ‌ ಕುರಿತ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆ ಹಿಟ್ಲರ್ ಮನಸ್ಥಿತಿ: ಬಸವರಾಜ ಬೊಮ್ಮಾಯಿ

Update: 2023-09-04 11:02 GMT

ಬೆಂಗಳೂರು: ತಮಿಳುನಾಡು ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆ ಖಂಡನೀಯವಾಗಿದ್ದು, ಅವರ ಹೇಳಿಕೆ ಅವರ ಹಿಟ್ಲರ್ ಮನಸ್ಥಿತಿ ತೋರಿಸುತ್ತದೆ. ಚುನಾವಣೆಯಲ್ಲಿ ಒಂದು ವರ್ಗವನ್ನು ಸೆಳೆಯಲು ಈ ರೀತಿ ಮಾಡುತ್ತಾರೆ. ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಉದಯನಿಧಿ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಸನಾತನ ಧರ್ಮ ಸರ್ವೇಜನ ಸುಖಿನೊಭವಂತು ಅಂತ ಹೇಳುತ್ತದೆ. ಮಾನವರಷ್ಟೇ ಅಲ್ಲ ಎಲ್ಲ ಜೀವಿಗಳು ಸುಖವಾಗಿರಲಿ ಅಂತ ಸನಾತನ ಧರ್ಮ ಬಯಸುತ್ತದೆ‌. ಸನಾತನ ಧರ್ಮವನ್ನು ಕಿತ್ತೊಗೆಯಬೇಕೆಂಬ ಮಾತು ಹಿಟ್ಲರ್ ಮೈಂಡ್ ಸೆಟ್, ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಸನಾತನ ಧರ್ಮದಲ್ಲಿ ಎಲ್ಲರಿಗೂ ಸಮಾನ ಅವಕಾಶ ಇದೆ‌. ಉದಯನಿಧಿ ಸ್ಟಾಲಿನ್ ಸಂವಿಧಾನ ವಿರೊಧಿ ಹೇಳಿಕೆ ನೀಡಿದ್ದಾರೆ. ಅವರನ್ನು ಸಂಪುಟದಿಂದ ಕಿತ್ತೊಗೆಯಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ಅವರ ಹೇಳಿಕೆ ಬಗ್ಗೆ ಇಂಡಿಯಾ ಕೂಟದ ಮಿತ್ರ ಪಕ್ಷಗಳು ಗೊಂದಲದಲ್ಲಿದ್ದಾವೆ. ಭಾರತದಲ್ಲಿ ಎಲ್ಲ ಧರ್ಮಗಳಿಗೆ ಅವಕಾಶ ಇದೆ. ಇಲ್ಲಿ ಬೌದ್ದ, ಜೈನ, ಸಿಖ್, ಇಸ್ಲಾಂ, ಸಿಖ್ ಧರ್ಮಗಳು ನೆಮ್ಮದಿಯಾಗಿವೆ. ಸುತ್ತಲಿನ ರಾಷ್ಟ್ರಗಳಲ್ಲಿ ಏನು ನಡೆಯುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಅವರು ಅಧಿಕಾರದ ಆಸೆಗೆ ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ. ಭಾರತದ ಜನರು ಇದೆಲ್ಲವನ್ನು ಗಮನಿಸುತ್ತಾರೆ. ಅವರು ಸೂಕ್ತ ಉತ್ತರ ನೀಡುತ್ತಾರೆ ಎಂದು ಹೇಳಿದರು.

ಉಚಿತ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ವಿರೋಧ ವ್ಯಕ್ತಪಡಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲ ಜನರ ಆದಾಯ ಹೆಚ್ಚಾಗಿ ಆರ್ಥಿಕತೆ ಹೆಚ್ಚಾಗಬೇಕು, ಆಗ ದೇಶ ಮತ್ತು ವ್ಯಕ್ತಿಗತ ಅಭಿವೃದ್ಧಿಗೆ ಅವಕಾಶ ಸಿಗಲಿದೆ ಎಂದು ಪ್ರಧಾನಿ ಹೇಳಿದ್ದಾರೆ. ಇದು ಶಾರ್ಟ್ ಪಿರಿಯಡ್ ಅಷ್ಟೇ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎಂದರು. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News