ಉಡುಪಿ: ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ

Update: 2023-09-29 10:48 IST
ಉಡುಪಿ: ಕರ್ನಾಟಕ ಬಂದ್‌ಗೆ ನೀರಸ ಪ್ರತಿಕ್ರಿಯೆ
  • whatsapp icon

ಉಡುಪಿ: ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉಡುಪಿ‌ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜಿಲ್ಲೆಯ ಕುಂದಾಪುರ ಕಾರ್ಕಳ ಬೈಂದೂರು ಉಡುಪಿ ಕಾಪು ಹೆಬ್ರಿ ಬ್ರಹ್ಮಾವರ ತಾಲೂಕುಗಳಲ್ಲಿ ಎಲ್ಲಾ ಅಂಗಡಿ ಮುಗ್ಗಟ್ಟುಗಳು ಎಂದಿನಂತೆ ತೆರೆದಿದ್ದವು

ಖಾಸಗಿ, ಸರಕಾರಿ ಬಸ್ ಗಳು ಓಡಾಟ ನಡೆಸುತ್ತಿದ್ದು,  ಇಲ್ಲಿ ಬಂದ್‌ಗೆ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಜನ ಸಂಚಾರ ಕೂಡ ಸಾಮಾನ್ಯವಾಗಿದೆ. ಆದರೆ ಬಂದ್ ಹಿನ್ನೆಲೆಯಲ್ಲಿ ಕೆಲವು ಶಾಲೆಗೆ ರಜೆ ಘೋಷಿಸಿರುವ ಬಗ್ಗೆ ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Safwan

contributor

Byline - ವಾರ್ತಾಭಾರತಿ

contributor

Similar News