ಬೆಂಗಳೂರು | ಕಟ್ಟಡ ಕುಸಿತ ಪ್ರಕರಣ : ಸಂತ್ರಸ್ತರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

Update: 2024-10-24 09:08 GMT

ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸಂತ್ರಸ್ತರ ಕುಟುಂಬದವರನ್ನು ಸಾಂತ್ವನ ಪಡಿಸುತ್ತಿರುವ ಸಿಎಂ ಸಿದ್ದರಾಮಯ್ಯ 

ಬೆಂಗಳೂರು: ಸಿಎಂ  ಸಿದ್ದರಾಮಯ್ಯ ಅವರು ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತವುಂಟಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಅವರು,  ನಿಯಮಬಾಹಿರವಾಗಿ, ಸೂಕ್ತ ಅನುಮತಿ ಪರವಾನಗಿ ಪಡೆಯದೆ ಕಟ್ಟಡ ನಿರ್ಮಾಣಕ್ಕೆ ಮುಂದಾಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ವಿಭಾಗೀಯ ಅಧಿಕಾರಿಗೂ ನೋಟಿಸ್ ನೀಡಿ ಕ್ರಮ ಕೈಗೊಳ್ಳಬೇಕು. ಅನಧಿಕೃತ ನಿರ್ಮಾಣ ನಿಲ್ಲಿಸುವಂತೆ ನೋಟಿಸ್ ನೀಡಿದ್ದರೂ ನಿರ್ಮಾಣ ಮುಂದುವರೆಸಿದ ಮಾಲೀಕರು, ಗುತ್ತಿಗೆದಾರ, ಎಂಜಿನಿಯರ್ ಎಲ್ಲರ ವಿರುದ್ಧವೂ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಬಿಬಿಎಂಪಿ‌ ಆಯುಕ್ತ ತುಷಾರ ಗಿರಿನಾಥ್ ಅವರಿಗೆ ಸಿಎಂ ಸೂಚನೆ ನೀಡಿದರು.

5 ಲಕ್ಷ ರೂ. ಪರಿಹಾರ ಘೋಷಣೆ : 

ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯನ್ನು ಸಂಪೂರ್ಣವಾಗಿ ಸರಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಚಿವ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಶಾಸಕ ಬೈರತಿ ಬಸವರಾಜ್ ಹಾಗೂ ಬಿಬಿಎಂಪಿ ಆಯುಕ್ತರು ಮತ್ತು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಘಟನಾ ಸ್ಥಳ ಪರಿಶೀಲನೆ ಬಳಿಕ‌ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಗತ್ಯ ಇರುವ ಎಲ್ಲಾ ಆಧುನಿಕ ವ್ಯವಸ್ಥೆ ಬಳಿಕ ಕಾರ್ಮಿಕರಿಗೆ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

Delete Edit
Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News