ನಿರುದ್ಯೋಗ ದೇಶದ ಬಹುದೊಡ್ಡ ಸಮಸ್ಯೆಯಾಗಿ ಮಾರ್ಪಾಡಾಗಿದೆ: ಸಚಿವ ಶರಣ ಪ್ರಕಾಶ್ ಪಾಟೀಲ್

Update: 2023-12-23 15:45 GMT

ಬೆಂಗಳೂರು: ರಾಜ್ಯದಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಮಂದಿ ಇಂಜಿನಿಯರಿಂಗ್ ಪದವಿಯನ್ನು ಪಡೆದು ಹೊರಬರುತ್ತಿದ್ದು, ಕನಿಷ್ಟ ಶೇ.50ರಷ್ಟು ಮಂದಿಗೆ ಕೆಲಸ ಸಿಗುತ್ತಿಲ್ಲ. ಹಾಗಾಗಿ ನಿರುದ್ಯೋಗವು ದೇಶದಲ್ಲಿ ಬಹುದೊಡ್ಡ ಸಮಸ್ಯೆಯಾಗಿ ಮಾರ್ಪಾಡಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಆತಂಕ ವ್ಯಕ್ತಪಡಿಸಿದ್ದಾರೆ. 

ಶನಿವಾರ ನಗರದ ಖಾಸಗಿ ಹೋಟೆಲ್‍ನಲ್ಲಿ ಆಯೋಜಿಸಿದ್ದ ಶಿಕ್ಷನದ ಕುರಿತಾದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ʼರಾಜ್ಯದಲ್ಲಿ ಉದ್ಯೋಗ ಸಾಕಷ್ಟು ಪ್ರಮಾಣದಲ್ಲಿ ಖಾಲಿ ಇದೆ. ಆದರೆ ಉದ್ಯೋಗಕ್ಕೆ ಬೇಕಾದ ಕೌಶಲ್ಯಗಳನ್ನು ಪಡೆಯುವಲ್ಲಿ ವಿದ್ಯಾರ್ಥಿಗಳು ವಿಫಲರಾಗುತ್ತಿದ್ದಾರೆ. ಹಾಗಾಗಿ ಐಟಿಐ, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಲಿಕೆಯೊಂದಿಗೆ ಕೌಶಲ್ಯ ಉಪಕ್ರಮವನ್ನು ಪರಿಚಯಿಸಲಾಗಿದೆʼ ಎಂದರು. 

ದೇಶದಲ್ಲಿ ಉನ್ನತ ಶಿಕ್ಷಣ ಎಂಬುದು ದುಬಾರಿಯಾಗುತ್ತಿದೆ. ಆದರೂ ರಾಜ್ಯದಲ್ಲಿ ವಿದ್ಯಾರ್ಥಿಗಳ ಹಿತಾದೃಷ್ಟಿಯಿಂದ ಹಣಕಾಸಿನ ನೆರವು ಕಲ್ಪಿಸಲಾಗುತ್ತಿದೆ. ಆದುದರಿಂದ ಉನ್ನತ ಶಿಕ್ಷಣವನ್ನು ಪಡೆಯಲು ನೆರೆ ರಾಜ್ಯದ ವಿದ್ಯಾರ್ಥಿಗಳೂ ರಾಜ್ಯಕ್ಕೆ ಬರುತ್ತಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ಮೆಡಿಕಲ್ ಕಾಲೇಜುಗಳಿದ್ದು. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಮೆಡಿಕಲ್ ಕಾಲೇಜುಗಳು ಸ್ಥಾಪನೆಯಾಗಬೇಕಾಗಿದೆ ಎಂದು ಅವರು ಹೇಳಿದರು. 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News