ಡಿಸಿಎಂ ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿಯಾದ ಕೇಂದ್ರ ಸಚಿವ ನಾರಾಯಣಸ್ವಾಮಿ

Update: 2023-08-18 14:15 GMT

ಬೆಂಗಳೂರು, ಆ. 18: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

ಶುಕ್ರವಾರ ಬೆಂಗಳೂರಿನಲ್ಲಿ ಉಭಯ ನಾಯಕರು ಪರಸ್ಪರ ಭೇಟಿ ಮಾಡಿದ್ದು, ಬರ ಪೀಡಿತ ಜಿಲ್ಲೆಗಳಾದ ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ನೀರು ಒದಗಿಸುವ ‘ಭದ್ರಾ ಮೇಲ್ದಂಡೆ ಯೋಜನೆ’ಯ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಿದ್ದಾರೆ ಎಂದು ಗೊತ್ತಾಗಿದೆ. 

ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಬೇಕೆಂಬ ಒತ್ತಾಯವಿದೆ. ಈ ನಡುವೆ ಬರ ಪೀಡಿತ ಜಿಲ್ಲೆಗಳ 5.50 ಲಕ್ಷ ಎಕರೆ ಕೃಷಿ ಪ್ರದೇಶಕ್ಕೆ ನೀರು ಒದಗಿಸುವ ಅತ್ಯಂತ ಮಹತ್ವದ ಈ ಯೋಜನೆಯಿಂದ 787 ಗ್ರಾಮಗಳ ಸಾವಿರಾರು ಕುಟುಂಬಗಳಿಗೆ ಪ್ರಯೋಜನ ಆಗಲಿದೆ ಎಂದು ಹೇಳಲಾಗಿದ್ದು, ಯೋಜನೆ ತ್ವರಿತ ಅನುಷ್ಟಾನ ಸಂಬಂಧ ಚರ್ಚಿಸಿದ್ದಾರೆಂದು ಹೇಳಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News