ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಸಚಿವ ಸತೀಶ್ ಜಾರಕಿಹೊಳಿ

Update: 2023-07-26 12:11 GMT

ಹೊಸದಿಲ್ಲಿ, ಜು. 26: ‘ಶಿರಾಡಿ ಘಾಟ್ ಸುರಂಗ ನಿರ್ಮಾಣ, ಗೋಕಾಕ್ ನಗರದಲ್ಲಿ ಎಲಿವೇಟೆಡ್ ಕಾರ್ಡ್ ನಿರ್ಮಾಣ, ಬೆಳಗಾವಿ ನಗರದ ಹಳೆಯ ಎನ್‍ಎಚ್-4ನ ಪುಣೆ-ಬೆಂಗಳೂರು ರಸ್ತೆಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಸೇರಿದಂತೆ ರಾಜ್ಯದ 20 ಯೋಜನೆಗಳ ಸಂಬಂಧ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜೊತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಚರ್ಚಿಸಿದ್ದಾರೆ.

ಬುಧವಾರ ದಿಲ್ಲಿಯಲ್ಲಿ ಕೇಂದ್ರ ಸಚಿವರನ್ನು ಖುದ್ದು ಭೇಟಿ ಮಾಡಿದ ಸತೀಶ್ ಜಾರಕಿಹೊಳಿ ಅವರು, ರಸ್ತೆ ನಿರ್ಮಾಣ ಯೋಜನೆಗಳಿಗೆ ವೇಗ ನೀಡಲು ಮನವಿ ಮಾಡಿದ್ದಾರೆ. ಕೇಂದ್ರ ಸಚಿವರು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಯೋಜನೆಗಳ ರೂಪರೇಷೆ ಸಿದ್ಧಪಡಿಸಿ ಸಲ್ಲಿಸುವಂತೆ ತಿಳಿಸಿರುತ್ತಾರೆ ಎಂದು ಸಚಿವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News