ಕಡಿಮೆ ಬೆಲೆಗೆ ಭಾರತ್ ಅಕ್ಕಿ, ಬೇಳೆ ವಿತರಣೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Update: 2024-10-23 14:18 GMT

ಹೊಸದಿಲ್ಲಿ : ದೀಪಾವಳಿ ಹಬ್ಬದ ವೇಳೆ ಆಹಾರ ಧಾನ್ಯ ಬೆಲೆ ನಿಯಂತ್ರಣದ ದೃಷ್ಟಿಯಿಂದ ಭಾರತ್ ಅಕ್ಕಿ, ಬೇಳೆಕಾಳು ಕಡಿಮೆ ಬೆಲೆ ಪೂರೈಕೆ ಮಾಡಲು ಕೇಂದ್ರ ಸರಕಾರ ಕ್ರಮ ಕೈಗೊಂಡಿದ್ದು, ಈ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆ ಹೊರೆ ತಗ್ಗಿಸಲು ಮುಂದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಬುಧವಾರ ದಿಲ್ಲಿಯ ಕೃಷಿ ಭವನದಲ್ಲಿ ಕಡಿಮೆ ದರದಲ್ಲಿ ಆಹಾರ ಧಾನ್ಯ ಪೂರೈಕೆ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದಿಲ್ಲಿಯ ಎನ್‍ಸಿಆರ್ ನಿವಾಸಿಗಳಿಗಾಗಿ ಕಡಲೆ ಬೇಳೆ 70ರೂ. ಕೆಜಿ, ಹೆಸರುಬೇಳೆ 107 ರೂ.ಕೆಜಿ ಮತ್ತು ತೊಗರಿಬೇಳೆ 89 ರೂ.ಕೆಜಿ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಗ್ರಾಹಕ ವ್ಯವಹಾರಗಳ ಇಲಾಖೆ ನೇತೃತ್ವದಲ್ಲಿ ಕೈಗೊಂಡ ಈ ಯೋಜನೆ ನಾಗರಿಕರ ಮೇಲೆ ಹೆಚ್ಚುತ್ತಿರುವ ಆಹಾರ ಧಾನ್ಯ, ಬೇಳೆ ಕಾಳು ಬೆಲೆ ಹೊರೆಯನ್ನು ಕಡಿಮೆ ಮಾಡುವ ಗುರಿ ಹೊಂದಿದೆ ಎಂದು ಹೇಳಿದರು. ಈ ವೇಳೆ ಕೇಂದ್ರ ಸಚಿವರಾದ ಬಿ.ಎಲ್.ವರ್ಮಾ ಹಾಗೂ ನಿಮುಬೇನ್ ಬಂಭಾನಿಯಾ ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News