ಬೆಲೇಕೇರಿ ಅದಿರು ನಾಪತ್ತೆ ಪ್ರಕರಣ | ಕಾಂಗ್ರೆಸ್ ಸರಕಾರದ ಭ್ರಷ್ಟತೆಗೆ ಕೈಗನ್ನಡಿ : ಜೋಶಿ ಟೀಕೆ

Update: 2024-10-25 16:10 GMT

ಹುಬ್ಬಳ್ಳಿ : ʼಎರಡು ನೂರು ಕೋಟಿ ರೂ.ಮೌಲ್ಯದ ಬೆಲೇಕೇರಿ ಅದಿರು ನಾಪತ್ತೆ ಪ್ರಕರಣ ಕಾಂಗ್ರೆಸ್ ಸರಕಾರದ ಭ್ರಷ್ಟತೆಗೆ ಕೈಗನ್ನಡಿʼ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳಜತೆ ಮಾತನಾಡಿದ ಅವರು, ‘ಭ್ರಷ್ಟಾಚಾರ ಎನ್ನುವುದು ಕಾಂಗ್ರೆಸ್ ಪಕ್ಷದ ರಕ್ತದಲ್ಲೇ ಇದೆ. ಬೆಲೇಕೇರಿ ಕಬ್ಬಿಣದ ಅದಿರು ನಾಪತ್ತೆ ಪ್ರಕರಣದಿಂದ ಮತ್ತೆ ಇದು ಸಾಬೀತಾಗಿದೆʼ ಎಂದು ತಿಳಿಸಿದರು.

200 ಕೋಟಿ ರೂ.ಮೌಲ್ಯದ 39,700 ಮೆಟ್ರಿಕ್ ಟನ್ ಅದಿರು ಅಕ್ರಮವಾಗಿ ಚೀನಾಕ್ಕೆ ರಫ್ತು ಮಾಡಿದ್ದ ಪ್ರಕರಣವನ್ನು ಸಿಬಿಐ ಭೇದಿಸಿದೆ. ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮತ್ತು ಇಬ್ಬರು ಸಹಚರರನ್ನು ಬಂಧಿಸಲು ಆದೇಶಿಸಿದ ಜನಪ್ರತಿನಿಧಿ ನ್ಯಾಯಾಲಯ ನ್ಯಾಯವನ್ನು ಎತ್ತಿ ಹಿಡಿದಿದೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಕಮಾಂಡ್ ನಾಯಕರೇ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಹೀಗಿರುವಾಗ ಆ ಪಕ್ಷದ ಉಳಿದ ನಾಯಕರಲ್ಲಿ ಪ್ರಾಮಾಣಿಕತೆಯನ್ನು ಅಪೇಕ್ಷಿಸಲು ಸಾಧ್ಯವೇ? ಎಂದು ಪ್ರಶ್ನಿಸಿರುವ ಅವರು, ‘ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡುವ ಜತೆಗೆ ಭ್ರಷ್ಟ ಸರಕಾರದಿಂದ ಜನರನ್ನು ಮುಕ್ತಿಗೊಳಿಸಲಿʼ ಎಂದು ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News