ಬಿಜೆಪಿಯ ಕಾರ್ಯಕ್ರಮಗಳಿಗೆ ಉನ್ನತ ಅಧಿಕಾರಿಗಳ ಬಳಕೆ ಸರಿಯಲ್ಲ: ಮಲ್ಲಿಕಾರ್ಜುನ ಖರ್ಗೆ
ಕಲಬುರಗಿ: ಬಿಜೆಪಿಯು ತನ್ನ ರಥ ಯಾತ್ರೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳನ್ನು ಉಸ್ತುವಾರಿಯಾಗಿ ನೇಮಕ ಮಾಡಿಕೊಂಡು ಬಳಿಸಿಕೊಳ್ಳುವುದು ಖಂಡನೀಯವಾಗಿದೆ. ಈ ಬಗ್ಗೆ ಪರಿಶೀಲಿಸುವಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವುದಾಗಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದ್ದಾರೆ.
ಬುಧವಾರ ನಗರದ ತನ್ನ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಮೊದಲ ಬಾರಿಗೆ ಪಕ್ಷದ ಕಾರ್ಯಕ್ರಮಗಳಿಗೆ ಎಲ್ಲಾ ಉನ್ನತ ಮಟ್ಟದ ಅಧಿಕಾರಿಗಳಾದ 'ಜೊತೆ ಕಾರ್ಯದರ್ಶಿ, ಆರ್ಮಿ ಅಧಿಕಾರಿಗಳನ್ನು ರಥ ಯಾತ್ರೆಯ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಇಂತಹ ಕೆಲಸ ಎಂದೂ ನಡೆದಿಲ್ಲ. ಇದು ಸರಿಯಲ್ಲ, ಮುಂದಿನ ಸರ್ಕಾರಗಳು ಇದನ್ನು ಮುಂದುವರಿಸಬಹುದು. ನಿಮ್ಮ ಕಾರ್ಯಕ್ರಮದ ಪ್ರಚಾರಕ್ಕಾಗಿ ನಿಮ್ಮ ಪಕ್ಷದ ಸ್ವಯಂಸೇವಕರನ್ನು ಬಳಸಿಕೊಳ್ಳಿವುದು ಬಿಟ್ಟು ಅಧಿಕಾರಿಗಳನ್ನು ಬಳಸಿಕೊಳ್ಳುವುದು ಸರಿಯಲ್ಲ ಎಂದು ಪ್ರಧಾನಿಗೆ ಪತ್ರ ಬೆರೆದಿದ್ದೇನೆ ಎಂದು ತಿಳಿಸಿದರು.