ಕೊಬ್ಬರಿ ಖರೀದಿ | ತುಮಕೂರು ಜಿಲ್ಲೆಯ ರೈತರಿಗೆ 346.50 ಕೋಟಿ ರೂ.ಪಾವತಿ : ಕೇಂದ್ರ ಸಚಿವ ವಿ.ಸೋಮಣ್ಣ

Update: 2024-08-06 15:09 GMT

Photo : x/@VSOMANNA_BJP

ಬೆಂಗಳೂರು : 2024ನೆ ಸಾಲಿನಲ್ಲಿ ತುಮಕೂರು ಜಿಲ್ಲೆಯ ಸುಮಾರು 27 ಸಾವಿರ ರೈತರಿಂದ ಒಟ್ಟು 3.15 ಲಕ್ಷ ಕ್ವಿಂಟಾಲ್ ಉಂಡೆ ಕೊಬ್ಬರಿಯನ್ನು ಕನಿಷ್ಟ ಬೆಂಬಲ ಬೆಲೆಯಡಿಯಲ್ಲಿ ಖರೀದಿಸಲಾಗಿತ್ತು. ಈ ಸಂಬಂಧ ಒಟ್ಟು ಬಾಬ್ತು 378 ಕೋಟಿ ರೂ.ಗಳನ್ನು ತುಮಕೂರಿನ ಕೊಬ್ಬರಿ ಬೆಳೆಗಾರರಿಗೆ ಪಾವತಿಸಬೇಕಾಗಿತ್ತು ಎಂದು ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಆ.5ರವರೆಗೆ ಸುಮಾರು 346.50 ಕೋಟಿ ರೂ.ಮೊತ್ತವನ್ನು (ಶೇ.92ರಷ್ಟು) ರೈತರ ಖಾತೆಗೆ ನೇರವಾಗಿ(ಡಿಬಿಟಿ ಮುಖೇನ) ಪಾವತಿಸಲಾಗಿದೆ. ಸುಮಾರು 24,600 ರೈತರಿಗೆ ಈ ಬಾಬ್ತು ನೇರವಾಗಿ ಡಿಬಿಟಿ ಮೂಲಕ ಪಾವತಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಬಾಕಿ ಉಳಿದ ಸುಮಾರು 2438 ರೈತರ ಖಾತೆಗೆ ಅಂದಾಜು 31.64 ಕೋಟಿ ರೂ.ಬಾಬ್ತನ್ನು ರೈತರಿಗೆ ಪಾವತಿಸಬೇಕಾಗಿದೆ. ಈ ಮೊತ್ತವನ್ನು ಅತೀ ಶೀಘ್ರದಲ್ಲಿ ತುಮಕೂರಿನ ರೈತರಿಗೆ ಪಾವತಿಸುವಂತೆ ರಾಜ್ಯದಲ್ಲಿನ ಸಂಬಂಧಪಟ್ಟ ಎಜೆನ್ಸಿಗೆ ನಿರ್ದೆಶನ ನೀಡಲಾಗಿದೆ ಎಂದು ಸೋಮಣ್ಣ ತಿಳಿಸಿದ್ದಾರೆ.

ಕೇಂದ್ರದಲ್ಲಿನ ನೆಫೆಡ್ ಸಂಸ್ಥೆಯಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಮೊತ್ತ 691 ಕೋಟಿ ರೂ.ಗಳನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಲು ಕ್ರಮ ಜರುಗಿಸಬೇಕೆಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ಸಚಿವ ಶಿವರಾಜ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಮನವಿ ಮಾಡಿರುವುದಾಗಿ ಸೋಮಣ್ಣ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News