ವಾಲ್ಮೀಕಿ ಹಗರಣ : ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Update: 2024-11-13 10:27 GMT

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಸಿಬಿಐಗೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ತನಿಖೆಯನ್ನು ಸಿಬಿಐಗೆ ನೀಡುವಂತೆ ನಿರ್ದೇಶನ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ರಿಟ್​ ಅರ್ಜಿಯನ್ನು ವಜಾಗೊಳಿಸಿ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದೆ.

ಬ್ಯಾಂಕಿಂಗ್​ ನಿಯಂತ್ರಣ ಅಧಿನಿಯಮ ಸೆಕ್ಷನ್ 35 ಎ ಅಡಿಯ ವ್ಯಾಖ್ಯಾನ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಲಾಗುವುದಿಲ್ಲ. ಒಂದು ವೇಳೆ ಅನುಮತಿ ನೀಡಿದರೆ ಎಲ್ಲಾ ಬ್ಯಾಂಕ್​ಗಳೂ ಇದನ್ನೇ ಕೇಳಬಹುದು. ಆಗ ದಿಲ್ಲಿ ಸ್ಪೆಷಲ್​ ಪೊಲೀಸ್ ಎಸ್ಟಾಬ್ಲಿಷ್​ಮೆಂಟ್​ ಆ್ಯಕ್ಟ್​ ನಿರರ್ಥಕವಾಗಬಹುದು ಎಂದು ಅರ್ಜಿ ತಿರಸ್ಕರಿಸಿ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿ ವಜಾಗೊಳಿಸಿ ಆದೇಶ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News