ವಾಲ್ಮೀಕಿ ನಿಗಮ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆಯಾಗಬೇಕು : ಪ್ರಹ್ಲಾದ್ ಜೋಶಿ

Update: 2024-07-13 07:17 GMT

PC : x/@JoshiPralhad

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಪ್ರಮುಖ ಹಗರಣಗಳಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ಮಾದ್ಯಮದವರೊಂದಿಗೆ ಮಾತನಾಡಿದ ಅವರು,"ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣಕಾಸು ಖಾತೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ಬಾರದೆಯೇ 187 ಕೋಟಿ ರೂ. ದೊಡ್ಡ ಮೊತ್ತ ವರ್ಗಾವಣೆ ಆಗಲು ಸಾಧ್ಯವೇ ಇಲ್ಲ" ಎಂದು ಜೋಶಿ ಹೇಳಿದರು.

ಸಿಎಂಗೂ ನೀಡಲಿ ನೋಟಿಸ್: ವಾಲ್ಮೀಕಿ ಅಭಿವೃದ್ದಿ ನಿಗಮದ ಭ್ರಷ್ಟಾಚಾರ ಹಗರಣದಲ್ಲಿ ಸಿಎಂ ಅವರಿಗೂ ಎಸ್‌ಐಟಿ ನೋಟಿಸ್ ನೀಡಬೇಕು ಮತ್ತು ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಪ್ರಹ್ಲಾದ್ ಜೋಶಿ ಒತ್ತಾಯಿಸಿದರು.

ಸಿಎಂ ನೇರ ಹೊಣೆ:  ಮೂಡಾ ಹಗರಣದಲ್ಲಿಯೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿದೆ. ಅವರ ಹಸ್ತಕ್ಷೇಪ, ಭಾಗಿ ಇಲ್ಲದೇ ಇರಲು ಸಾಧ್ಯವಿಲ್ಲ. ಹಾಗಾಗಿ ಇದರಲ್ಲಿ ಸಿಎಂ ವಿರುದ್ಧ ನೇರ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News