ವಾಲ್ಮೀಕಿ ನಿಗಮದಲ್ಲಿ ಅಕ್ರಮ: ನಕಲಿ ಖಾತೆ ತೆರೆದಿದ್ದ ಆರೋಪಿಯ ಬಂಧನ

Update: 2024-06-12 06:50 GMT

ಬೆಂಗಳೂರು: ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ ನಕಲಿ ಖಾತೆ ತೆರೆದಿದ್ದ ಆರೋಪಿಯನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಆರೋಪಿಯನ್ನು ಸತ್ಯನಾರಾಯಣ ವರ್ಮ ಎಂದು ಗುರುತಿಸಲಾಗಿದೆ. ವಿವಿಧ ಕಂಪೆನಿಗಳ ಹೆಸರಿನಲ್ಲಿ 18 ಬ್ಯಾಂಕ್ ಖಾತೆ ತೆರೆದಿದ್ದ ಈತನನ್ನು ಹೈದರಾಬಾದ್ನಲ್ಲಿ ಬಂಧಿಸಲಾಗಿದೆ.

ಬಂಧಿತ ಸತ್ಯನಾರಾಯಣನ ಎಲ್ಲಾ 18 ಬ್ಯಾಂಕ್ ಖಾತೆಗಳಿಗೂ ವಾಲ್ಮೀಕಿ ನಿಗಮದಿಂದ ಹಣ ವರ್ಗಾವಣೆ ಆಗಿದ್ದು, ಈತನ ಬಳಿಯಿಂದ 16 ಕೆಜಿ ಚಿನ್ನ, 10 ಕೋಟಿ ನಗದು ಜಪ್ತಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇಂದು ಸತ್ಯನಾರಾಯಣನನ್ನು ಎಸ್ಐಟಿ ಅಧಿಕಾರಿಗಳು ಬೆಂಗಳೂರಿಗೆ ಕರೆತರಲಿದ್ದಾರೆ.

ಪ್ರಕರಣದ ವಿವರ

ವಾಲ್ಮೀಕಿ ನಿಗಮಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂ. ಅಕ್ರಮ ವರ್ಗಾವಣೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್ಐಟಿ ರಚಿಸಿತ್ತು. ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಎಂಬುವವರನ್ನು ಈಗಾಗಲೇ ಎಸ್ಐಟಿ ಬಂಧಿಸಿದ್ದು ವಿಚಾರಣೆಗೆ ಒಳಪಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News