ವಾಲ್ಮೀಕಿ ಹಗರಣ | ಈಡಿ ಅಧಿಕಾರಿಗಳ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿದ ಹೈಕೋರ್ಟ್
Update: 2024-11-08 12:20 GMT
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರನ್ನು ಹೇಳುವಂತೆ ಒತ್ತಾಯಿಸಿದ್ದ ಆರೋಪ ಸಂಬಂಧ ಜಾರಿ ನಿರ್ದೇಶನಾಲಯ(ಈಡಿ)ದ ಇಬ್ಬರು ಅಧಿಕಾರಿಗಳ ವಿರುದ್ಧ ನಿಗಮದಲ್ಲಿ ಸೇವೆ ಸಲ್ಲಿಸುತ್ತಿರುವ ಬಿ.ಕಲ್ಲೇಶ್ ಎಂಬುವರು ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ಜಾರಿ ನಿರ್ದೇಶನಲಯದ ಉಪ ನಿರ್ದೇಶಕ ಮನೋಜ್ ಮಿತ್ತಲ್ ಮತ್ತು ಸಹಾಯಕ ನಿರ್ದೇಶಕ ಮುರಳಿ ಕಣ್ಣನ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಈ ಆದೇಶ ನೀಡಿದೆ.