ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ : ರಾಜ್ಯಪಾಲರಿಂದ ಸ್ವಾಗತ

Update: 2024-10-25 09:20 GMT

ಬೆಂಗಳೂರು : ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಹಾಗೂ ಸುದೇಶ್ ಧನ್ಕರ್ ಅವರು ಕರ್ನಾಟಕ ಪ್ರವಾಸಕ್ಕಾಗಿ ಇಂದು(ಅ.25) ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಆಗಮಿಸಿದರು

ಉಪರಾಷ್ಟ್ರಪತಿ‌ ಜಗದೀಪ್ ಧನ್ಕರ್‌ ಅವರನ್ನು ರಾಜ್ಯಪಾಲರಾದ ಥಾವರ್‌ ಚಂದ್ ಗೆಹ್ಲೋಟ್ ಅವರು ಸ್ವಾಗತಿಸಿದರು.

ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿಗಳು ನಂತರ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಮಂಡ್ಯ ಜಿಲ್ಲೆಯ ನಾಗಮಂಗಲದ ಬಿ.ಜಿ. ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯವು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವ ಸಲುವಾಗಿ ಆದಿಚುಂಚನಗಿರಿಗೆ ಪ್ರಯಾಣ ಕೈಗೊಂಡರು.

ಈ ಸಂದರ್ಭದಲ್ಲಿ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ ಜಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಜಗದೀಶ್ ಜಿ, ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ.ದಯನಂದ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News