ವಿಧಾನ ಪರಿಷತ್ ಚುನಾವಣೆ : ಅರ್ಹ ಮತದಾರರಿಗೆ ರಜೆ

Update: 2024-05-29 15:28 GMT

ಸಾಂದರ್ಭಿಕ ಚಿತ್ರ (PTI) 

ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯ ಪ್ರಯುಕ್ತ ಜೂನ್ 3ರಂದು ಮತದಾನ ನಡೆಯಲಿದ್ದು, ಪದವೀಧರರು, ಶಿಕ್ಷಕರು ಸೇರಿದಂತೆ ಅರ್ಹ ಮತದಾರರಿಗೆ ರಾಜ್ಯ ಸರಕಾರದ ವತಿಯಿಂದ ರಜೆ ಘೋಷಿಸಲಾಗಿದೆ.

ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ, ನೈರುತ್ಯ ಪದವೀಧರರ ಕ್ಷೇತ್ರ, ಬೆಂಗಳೂರು ಪದವೀಧರರ ಕ್ಷೇತ್ರ, ಆಗ್ನೇಯ ಪದವೀಧರರ ಕ್ಷೇತ್ರ, ಆಗ್ನೇಯ ಪದವೀಧರರ ಕೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಗಳ ವ್ಯಾಪ್ತಿಯ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.

ಮೇಲಿನ ವಿಧಾನಪರಿಷತ್ ಮತಕ್ಷೇತ್ರದ ವ್ಯಾಪ್ತಿಯ ಸರಕಾರಿ, ಖಾಸಗಿ, ಅನುದಾನಿತ, ಅನುದಾನ ರಹಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ರಾಜ್ಯ, ಕೇಂದ್ರ ಸರಕಾರದ ಕಚೇರಿಗಳು, ರಾಷ್ಟ್ರೀಕೃತ ಬ್ಯಾಂಕ್‍ಗಳು, ಸರಕಾರದ ಕಾರ್ಖಾನೆಗಳು, ಕೈಗಾರಿಕೆ ಸಂಸ್ಥೆಗಳು ಹಾಗೂ ಖಾಯಂ, ದಿನಗೂಲಿ, ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಜೂ.3 ಸೋಮವಾರದಂದು ವಿಶೇಷ ಸಾಂಧರ್ಬಿಕ ರಜೆಯನ್ನು ಮಂಜೂರು ಮಾಡುವಂತೆ ರಾಜ್ಯ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News