ಕಾಂಗ್ರೆಸ್ ಸರಕಾರ ದಲಿತರ ಹಣವನ್ನು ʼಗ್ಯಾರಂಟಿʼಗೆ ವರ್ಗಾವಣೆ ಮಾಡಿ, ದಲಿತರಿಗೆ ಅನ್ಯಾಯ ಮಾಡಿದೆ : ವಿಜಯೇಂದ್ರ

Update: 2024-07-11 10:48 GMT

Screengrab : x/@BJP4Karnataka

ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ರಾಜ್ಯದ ಕಾಂಗ್ರೆಸ್ ಸರಕಾರವು ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾವಣೆ ಮಾಡಿ ದಲಿತರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಗುರುವಾರ ತಮ್ಮ ನೇತೃತ್ವದಲ್ಲಿ ಆರಂಭವಾದ ರಾಜ್ಯ ಪದಾಧಿಕಾರಿಗಳ ಸಭೆಯನ್ನು ಉದ್ಘಾಟನೆ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, "ರಾಜ್ಯ ಸರಕಾರವು ಒಂದೆಡೆ ಎಸ್‍ಟಿ ಅಭಿವೃದ್ಧಿ ನಿಗಮ, ಎಸ್‍ಇಪಿ-ಟಿಎಸ್‍ಪಿಗಳಲ್ಲಿ ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ವರ್ಗಾಯಿಸಿದೆ. ಮತ್ತೊಂದು ಕಡೆ ವಾಲ್ಮೀಕಿ ನಿಗಮದಲ್ಲಿ ದಲಿತರಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿ ಲೋಕಸಭಾ ಚುನಾವಣೆಯಲ್ಲಿ ದುರ್ಬಳಕೆ ಮಾಡಿಕೊಂಡಿದೆ. ಇವುಗಳನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿ ಹೋರಾಟ ಮಾಡುತ್ತಿದೆ" ಎಂದು ತಿಳಿಸಿದರು.

ʼಸಿದ್ದರಾಮಯ್ಯನವರು ದಲಿತರಿಗೆ ಮೀಸಲಿಟ್ಟ 12 ಸಾವಿರ ಕೋಟಿ ಹಣವನ್ನು ಗ್ಯಾರಂಟಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ತದನಂತರ ಕೂಡ ಸುಮಾರು ಅಷ್ಟೇ ಮೊತ್ತ ವರ್ಗಾಯಿಸಿದ್ದಾರೆ. ಒಟ್ಟಾಗಿ 24,500 ಕೋಟಿ ಮೊತ್ತವನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಿಕೊಳ್ಳಲಾಗಿದೆ. ಈ ಕುರಿತು ದಿಲ್ಲಿಯಿಂದ ಬಂದ ಪತ್ರಕ್ಕೆ ಸರಕಾರ ಉತ್ತರ ಕೊಡಬೇಕಿದೆʼ ಎಂದು ವಿವರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News