ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ | ವಿಜಯೇಂದ್ರಗೆ ಏನು ಕೆಲಸವಿತ್ತೋ ಏನೋ ಹೋರಾಟಕ್ಕೆ ಹೋಗಿಲ್ಲ : ಯತ್ನಾಳ್ ಲೇವಡಿ
ವಿಜಯಪುರ : ‘ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ಎಂದು ಎಲ್ಲ ಕಡೆ ಬೋರ್ಡ್ ಹಾಕಿದ್ದರು. ಪಾಪ ವಿಜಯೇಂದ್ರಗೆ ನಿನ್ನೆ ಏನು ಕೆಲಸವಿತ್ತೋ ಏನೋ ಗೊತ್ತಿಲ್ಲ, ಅವರು ಆ ಹೋರಾಟದಲ್ಲಿ ಪಾಲ್ಗೊಂಡಿಲ್ಲ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದಿಲ್ಲಿ ಲೇವಡಿ ಮಾಡಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರಿದ್ದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪಕ್ಷದಲ್ಲಿ ಸಾಮೂಹಿಕ ನಾಯಕತ್ವ ಇದ್ದು, ನಾವು ವಕ್ಫ್ ವಿರುದ್ಧ ಹೋರಾಟ ಮಾಡಿದ್ದೇವೆ ಎಂದರು.
ಪ್ರತಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಧ್ಯೆ ಸಮನ್ವಯತೆ ಕೊರತೆಯ ಬಗ್ಗೆ ನನಗೆ ಗೊತ್ತಿಲ್ಲ. ಆರ್.ಅಶೋಕ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ. ಬೆಳಗಾವಿ ಅಧಿವೇಶನದಲ್ಲಿ ಹಿರಿಯ ಶಾಸಕರ ಸಲಹೆ ಸೂಚನೆ ತೆಗೆದುಕೊಂಡರು. ಎಲ್ಲರೂ ಹೇಳಿದ ವಿಚಾರಗಳನ್ನು ಪಾಲನೆ ಮಾಡಿದರು ಎಂದರು.