ʼʼವಿಜಯೇಂದ್ರರ ಪದಗ್ರಹಣ, ಬಿಜೆಪಿಗೆ ಹಿಡಿದ ಗ್ರಹಣʼʼ: ಯತ್ನಾಳ್, ಬೆಲ್ಲದ್ ಸಹಿತ ಗೈರಾದವರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌

Update: 2023-11-15 15:33 GMT

ಬೆಂಗಳೂರು, ನ. 15: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ವಂಚಿತರು, ಬಿಎಸ್‍ವೈ ಕುಟುಂಬದ ವಿರುದ್ಧ ಅಸಮಾಧಾನಗೊಂಡವರು ಹಾಗೂ ಪಕ್ಷ ತೊರೆಯಲು ಸಿದ್ದರಾಗಿರುವ ಹಲವು ಹಿರಿಯ ಮುಖಂಡರು ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪದಗ್ರಹಣ ಸಮಾರಂಭದಿಂದ ದೂರ ಉಳಿಯುವ ಮೂಲಕ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.

ಬುಧವಾರ ಇಲ್ಲಿನ ಮಲ್ಲೇಶ್ವರದ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ನೂತನ ರಾಜ್ಯಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ವಿಜಯಪುರ ಕ್ಷೇತ್ರದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ ಅರವಿಂದ ಬೆಲ್ಲದ್, ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಸಿ.ಟಿ.ರವಿ ಸೇರಿದಂತೆ ಹಲವು ನಾಯಕ ಪದಗ್ರಹಣ ಕಾರ್ಯಕ್ರಮದಿಂದ ದೂರವೇ ಉಳಿದಿದ್ದರು.

ಇತ್ತೀಚಿನ ದಿನಗಳಲ್ಲಿ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಕ್ಷೇತ್ರದಲ್ಲಿಯೇ ಇದ್ದರೂ ಪಕ್ಷದ ಕಚೇರಿಯತ್ತ ಸುಳಿಯಲಿಲ್ಲ. ಈ ಮಧ್ಯೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಗೈರು ಹಾಜರಾಗಿದ್ದರು. ಸಿ.ಟಿ.ರವಿ ಮೊದಲೇ ಗೈರಾಗುವ ಮಾಹಿತಿ ನೀಡಿ ನೂತನ ಅಧ್ಯಕ್ಷರ ಭೇಟಿ ಮಾಡಿ ಶುಭ ಕೋರಿದ್ದರು.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ವಿಜಯೇಂದ್ರ ಪದಗ್ರಹಣಕ್ಕೆ ಗೈರಾದವರ ಪಟ್ಟಿಯನ್ನು ಬಿಡುಗಡೆ ಮಾಡಿದೆ. 

ʼʼವಿಜಯೇಂದ್ರರ ಪದಗ್ರಹಣ, ಬಿಜೆಪಿಗೆ ಹಿಡಿದ ಗ್ರಹಣ. ಬಿಜೆಪಿಯ ಮುಂದಿನ ಸಾಲಿನ ನಾಯಕರೇ ಪದಗ್ರಹಣ ಸಮಾರಂಭಕ್ಕೆ ಗೈರಾಗಿ ನೂತನ ಅಧ್ಯಕ್ಷರ ವಿರುದ್ಧ ಬಂಡಾಯ ಸಾರಿದ್ದಾರೆ. ಸಮಾರಂಭಕ್ಕೆ ರಾಷ್ಟ್ರೀಯ ನಾಯಕರೂ ಪತ್ತೆ ಇಲ್ಲ, ರಾಜ್ಯದ ನಾಯಕರೂ ಪತ್ತೆ ಇಲ್ಲ. ವಿಜಯೇಂದ್ರ ಬಿಜೆಪಿಯೊಳಗಿನ ಕೆಜೆಪಿಯ ಅಧ್ಯಕ್ಷರೇ ಹೊರತು ಬಿಜೆಪಿಯ ಅಧ್ಯಕ್ಷರಲ್ಲ!.ಗೈರಾದವರ ಪಟ್ಟಿ ನೋಡುತ್ತಿದ್ದರೆ "ಸಂತೋಷ ಕೂಟ"ದ ಸದಸ್ಯರ ಸಂಖ್ಯೆ ಹೆಚ್ಚುವ ಲಕ್ಷಣವಿದೆʼʼ ಎಂದು ಕಾಂಗ್ರೆಸ್‌ ಕಾಲೆಳೆದಿದೆ. 

ಕಾಂಗ್ರೆಸ್‌ ಬಿಡುಗಡೆ ಮಾಡಿದ ಗೈರಾದವರ ಪಟ್ಟಿ ಇಲ್ಲಿದೆ...

 

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News