ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ : ಅಂತಿಮ ಫಲಿತಾಂಶ ಪ್ರಕಟ
Update: 2024-12-12 13:00 GMT
ಬೆಂಗಳೂರು : ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಕ್ಟೋಬರ್ 27ರಂದು ನಡೆಸಲಾದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಅಂತಿಮ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ಪ್ರಕಟಿಸಿದೆ.
ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಕನಿಷ್ಠ 50 ಅಂಕ ಪಡೆದಿರುವ ಹಾಗೂ ಪತ್ರಿಕೆ -1 ಮತ್ತು ಪತ್ರಿಕೆ-2ರಲ್ಲಿ ಕನಿಷ್ಠ ಶೇ.35ರಷ್ಟು ಅಂಕ ಪಡೆದಿರುವ ಅರ್ಹರ ಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ. ಈ ಅಂಕಪಟ್ಟಿಯನ್ನು ಆಯಾ ಜಿಲ್ಲಾಧಿಕಾರಿಗಳಿಗೆ ಕಳುಹಿಸಲಾಗುವುದು. ಅಂತಿಮವಾಗಿ ಆಯ್ಕೆ ಪಟ್ಟಿಯನ್ನು ಜಿಲ್ಲಾಧಿಕಾರಿಗಳೇ ಪ್ರಕಟಿಸಲಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರಕಟನೆಯಲ್ಲಿ ತಿಳಿಸಿದ್ದಾರೆ.