ನೀತಿ ಸಂಹಿತೆ ಉಲ್ಲಂಘನೆ | ಜೆ.ಪಿ.ನಡ್ಡಾ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿದ ಹೈಕೋರ್ಟ್
Update: 2024-11-07 06:59 GMT
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ.
ಶಿಗ್ಗಾಂವಿ ಠಾಣೆಯಲ್ಲಿ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ರದ್ದು ಕೋರಿ ಜೆ.ಪಿ.ನಡ್ಡಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಮೇಲಿನ ಆದೇಶ ನೀಡಿದೆ.
ಚುನಾವಣಾ ಪ್ರಚಾರದ ವೇಳೆ ಮೋದಿ ಆಶೀರ್ವಾದದಿಂದ ವಂಚಿತರಾಗಬೇಡಿ ಎಂದು ಹೇಳಿಕೆ ನೀಡಿದ್ದರು. ಇದು ನೀತಿ ಸಂಹಿತೆ ಉಲ್ಲಂಘನೆ ಆಗುವುದಿಲ್ಲ ಎಂದು ಜೆ.ಪಿ.ನಡ್ಡಾ ಪರ ವಕೀಲ ಎಂ.ವಿನೋದ್ ಕುಮಾರ್ ವಾದ ಮಂಡಿಸಿದ್ದರು.
ಈ ವಾದ ಒಪ್ಪಿದ ಹೈಕೋರ್ಟ್, ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ.