ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಜೆ.ಪಿ.ನಡ್ಡಾ ಪ್ರಕರಣಕ್ಕೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆ

Update: 2023-10-12 15:39 GMT

JP Nadda | Photo : PTI

ಧಾರವಾಡ, ಅ.12: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧದ ಪ್ರಕರಣಕ್ಕೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ನಡ್ಡಾ ಅವರು ಮತದಾರರಿಗೆ ಆಮಿಷ ಒಡ್ಡಿದ್ದಾರೆಂದು ದೂರು ದಾಖಲಿಸಲಾಗಿತ್ತು. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಭಾಷಣ ಮಾಡುವಾಗ ಮತದಾರರ ಮೇಲೆ ಪ್ರಧಾನಿ ಮೋದಿ ಆಶೀರ್ವಾದ ಇರುತ್ತೆ ಎಂದು ಅವರು ಹೇಳಿದ್ದರು. ಈ ವೇಳೆ ನಡ್ಡಾ ಮೇಲೆ ಚುನಾವಣಾ ನೀತಿ ಸಂಹಿತೆ ಅಧಿಕಾರಿ ಲಕ್ಷ್ಮಣ ನಂದಿ ಎನ್ನುವವರು ದೂರು ದಾಖಲಿಸಿದ್ದರು.

2023ರ ಮೇ 1ರಂದು ಅಂದಿನ ಮುಖ್ಯಮಂತ್ರಿ ಹಾಗೂ ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಭಾಷಣ ಮಾಡುವಾಗ ನಡ್ಡಾ ಈ ರೀತಿ ಹೇಳಿದ್ದರು. ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ತಡೆ ಕೋರಿ ನಡ್ಡಾ ಪರ ವಕೀಲರು ಧಾರವಾಡ ಹೈಕೋರ್ಟ್ ಪೀಠದ ಮೆಟ್ಟಿಲೇರಿದ್ದರು. ಗುರುವಾರ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News