ನಿಯಮ ಉಲ್ಲಂಘಿಸಿ ಪ್ರತಿಭಟನೆ : ವೀರಪ್ಪ ಮೊಯ್ಲಿ, ನಲಪಾಡ್​ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

Update: 2024-02-20 16:01 GMT

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹಾರಿಸ್ ನಲಪಾಡ್  ವಿರುದ್ಧ 42ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.

ಜಾರಿ ನಿರ್ದೇಶನಾಲಯ (ಈಡಿ) ದ ವಿರುದ್ಧ 2022 ರ ಆಗಸ್ಟ್ ತಿಂಗಳಿನಲ್ಲಿ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆ ವೀರಪ್ಪ ಮೊಯ್ಲಿ, ಮೊಹಮ್ಮದ್ ಹಾರಿಸ್ ನಲಪಾಡ್ ವಿರುದ್ಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ ಕೋರ್ಟ್ ವಾರೆಂಟ್ ಜಾರಿಗೊಳಿಸಿ, ವಿಚಾರಣೆ ಮುಂದೂಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News