ರಾಯರೆಡ್ಡಿ, ಬಿ.ಆರ್.ಪಾಟೀಲ್, ದೇಶಪಾಂಡೆಗೆ ‘ಸಂಪುಟ ದರ್ಜೆ ಸ್ಥಾನಮಾನ’

Update: 2023-12-29 15:04 GMT

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ ಅವರನ್ನು ‘ಆಡಳಿತ ಸುಧಾರಣಾ ಆಯೋಗ ಅಧ್ಯಕ್ಷ ಹಾಗೂ ಬಿ.ಆರ್.ಪಾಟೀಲ್‍ರನ್ನು ಮುಖ್ಯಮಂತ್ರಿ ಸಲಹೆಗಾರರನ್ನಾಗಿ ನೇಮಕ ಮಾಡಿದ್ದರೆ, ಬಸವರಾಜ್ ರಾಯರೆಡ್ಡಿ ಅವರನ್ನು ಸಿಎಂ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಇದೇ ವೇಳೆ ಈ ಮೇಲ್ಕಂಡ ಮೂವರಿಗೂ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ. ಬಿ.ಆರ್. ಪಾಟೀಲ್ ಹಾಗೂ ಬಸವರಾಜ ರಾಯರೆಡ್ಡಿ ಅವರು ಸರಕಾರಕ್ಕೆ ಮುಜುಗರ ಸೃಷ್ಟಿಸುವ ಹೇಳಿಕೆಗಳನ್ನು ನೀಡುವ ಮೂಲಕ ಗಮನ ಸೆಳೆದಿದ್ದರು. ಈ ಮಧ್ಯೆ ಇಬ್ಬರು ಶಾಸಕರನ್ನು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕರೆದು ಸಮಾಧಾನ ಮಾಡಿದ್ದರು. ಇದೀಗ ಅವರಿಗೆ ಸರಕಾರದ ಮಟ್ಟದಲ್ಲಿ ಸ್ಥಾನ ನೀಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News