ಭಾರತ್ ಜೋಡೊ ಯಾತ್ರೆ ನೆನಪಿನಲ್ಲಿ ಸೆ. 7ಕ್ಕೆ ಪಾದಯಾತ್ರೆ: ಡಿಸಿಎಂ ಡಿಕೆ ಶಿವಕುಮಾರ್​

Update: 2023-09-04 16:58 GMT
ಭಾರತ್‌ ಜೋಡೊ ಯಾತ್ರೆ- ಫೈಲ್‌ ಚಿತ್ರ

ಬೆಂಗಳೂರು: ʼಇದೇ ಸೆ.7ಕ್ಕೆ ಭಾರತ್ ಜೋಡೊ ಯಾತ್ರೆಗೆ 1 ವರ್ಷ ತುಂಬುತ್ತದೆ. ಇದರ ನೆನಪಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಒಂದು ಗಂಟೆಗಳ ಕಾಲ ಪಾದಯಾತ್ರೆ ಹಮ್ಮಿಕೊಳ್ಳಬೇಕು ಎಂದು ನಿರ್ಧರಿಸಲಾಗಿದೆʼ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

ಸಿಎಂ ಗೃಹಕಚೇರಿ ಕೃಷ್ಣಾ ಬಳಿ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ʼʼಸೆ.7ಕ್ಕೆ ಸಂಜೆ 5 ರಿಂದ 6 ಗಂಟೆಯ ತನಕ ಈ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಮನಗರ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡಿದ್ದು, ಅಲ್ಲಿ ಅವರು ಹೆಜ್ಜೆ ಹಾಕಲಿದ್ದಾರೆ" ಎಂದು ಮಾಹಿತಿ ನೀಡಿದರು.

"ಪಾದಯಾತ್ರೆಯನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಬೇಕು ಎಂದು ಯೋಚನೆ ಇತ್ತು, ನಾಗರಿಕರಿಗೆ ಟ್ರಾಫಿಕ್ ಸಮಸ್ಯೆ ಆಗುತ್ತದೆ ಎಂದು ಕೈಬಿಡಲಾಯಿತು. ಸೆ.7 ರಂದು ಕ್ಯಾಬಿನೆಟ್ ಸಭೆ ಇರುವ ಕಾರಣ ಜಿಲ್ಲಾ ಮಂತ್ರಿಗಳು ಆಯಾಯ ಜಿಲ್ಲೆಗಳಲ್ಲಿ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ" ಎಂದರು.

ಬೆಳಗಾವಿಯನ್ನು ಮೂರು ಜಿಲ್ಲೆಗಳಾಗಿ ವಿಂಗಡಿಸಬೇಕು ಎಂದು ಸತೀಶ್ ಜಾರಕಿಹೊಳಿ ಬೇಡಿಕೆ ಇಟ್ಟಿದ್ದಾರೆಯೇ ಎನ್ನುವ ಪ್ರಶ್ನೆಗೆ “ಅವರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಆ ವಿಚಾರವಾಗಿ ಯಾವುದೇ ತೀರ್ಮಾನ ಸದ್ಯಕ್ಕಿಲ್ಲ, ಆಡಳಿತ ದೃಷ್ಟಿಯಿಂದ ಸುಲಭ ಆಗುತ್ತದೆ ಎಂದು ಮನವಿ ನೀಡಿದ್ದಾರೆ ಎಂದು ಡಿಕೆಶಿ ತಿಳಿಸಿದರು. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News